ಜಿಲ್ಲಾಡಳಿತ ಭವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಬೆಂಗಳೂರು ಗ್ರಾಮಾಂತರ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜೀವನ ಚರಿತ್ರೆ, ಸಾಧನೆಯನ್ನು ಓದಿದರೆ ಸಾಲದು, ಜತೆಗೆ ಅವರ ಸಂದೇಶ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಕಾರ್ಯಕ್ರಮದಲ್ಲಿ […]

Continue Reading

ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದಿಂದ 50ನೇ ಮಾಸಿಕ ರಂಗ ಕಲಾಜ್ಯೋತಿ ಕಾರ್ಯಕ್ರಮ

*ದೊಡ್ಡಬಳ್ಳಾಪುರ*: ಪೌರಾಣಿಕ ನಾಟಕಗಳನ್ನು ಅಭಿನಯಿಸುವ ಜೊತೆಗೆ ಸಾಮಾಜಿಕ, ಐತಿಹಾಸಿಕ ನಾಟಕಗಳ ಪ್ರದರ್ಶನಕ್ಕೂ ಉತ್ತೇಜನ ಅಗತ್ಯವಾಗಿದೆ. ಸಮಕಾಲೀನ ಆಶೋತ್ತರಗಳಿಗೆ ತಕ್ಕಂತೆ ನಾಟಕಗಳ ವಸ್ತು, ಅಭಿವ್ಯಕ್ತಿ ಮತ್ತು ಆಶಯಗಳಲ್ಲಿ ಮಾರ್ಪಾಟು ಮಾಡಿಕೊಳ್ಳುವುದು ಅಗತ್ಯ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಲ್ಲಿನ ಮುದ್ದನಾಯಕನಪಾಳ್ಯ ಬಳಿ ಇರುವ ಜಿಲ್ಲಾ ಕಲಾ ಭವನದಲ್ಲಿ ಶನಿವಾರ ನಡೆದ 50ನೇ ಮಾಸಿಕ […]

Continue Reading

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕಾರ್ಯ ಪತ್ರಕರ್ತರಿಂದಾಗಬೇಕು – ಸಿ ಎಂ ಸಿದ್ದರಾಮಯ್ಯ

ಬೀದರ್ : ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೀದರ್ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು […]

Continue Reading

ದಡಘಟ್ಟಮಡುಗು ಜಮೀನು ವಿವಾದ :ಆರೋಪಿ ಲೋಕೇಶ್ ಬಂಧಿಸಿರುವ ಪೊಲೀಸರು ವಕೀಲ ಪ್ರತಾಪ್ ನನ್ನು ಬಂಧಿಸಿಲ್ಲ ಯಾಕೆ… – ಕಲ್ಯಾಣ್ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾಸಲು ಹೋಬಳಿಯ ದಡಘಟ್ಟಮಡುಗು ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳ ಹಿಂದೆ ವಕೀಲ ಪ್ರತಾಪ್ ಹಾಗೂ ಸ್ಥಳೀಯರ ನಡುವೆ ಜಮೀನು ವಿವಾದ ಸೃಷ್ಟಿಯಾಗಿದ್ದು ಸದರಿ ಜಮೀನು ವಿಚಾರದ ಗಲಾಟೆ ಕುರಿತು ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು ಸದರಿ ಇಬ್ಬರ ಮೇಲೂ ಎಫ್ ಐ ಆರ್ ದಾಖಲಾಗಿತ್ತು ಆದರೆ ಈಗ ಆರೋಪಿ ಲೋಕೇಶ್ ನನ್ನು ಯಾವುದೇ ಮಾಹಿತಿ ನೀಡದೆ ಬಂಧಿಸಿರುವ ಪೊಲೀಸರು ಮತ್ತೋರ್ವ ಆರೋಪಿ ಪ್ರತಾಪ್ ನನ್ನ ಬಂಧಿಸಿಲ್ಲ ಏಕೆ ಎಂದು […]

Continue Reading

ಕೆಆರ್‌ಎಸ್ ಪಕ್ಷದ ಮುಖಂಡ ನಿಖಿಲ್ ಹಾಗೂ ಸಹಚರರ ಮೇಲೆ FIR : ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರ ಅಗ್ರಹ

ದೇವನಹಳ್ಳಿ : ಜೀವನಪಾಯಕ್ಕಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಂಡಿದ್ದೇವೆ ಆದರೆ ಕೆಆರ್‌ಎಸ್ ಪಕ್ಷದ ಮುಖಂಡ ನಿಖಿಲ್ ಹಾಗೂ ಸಹಚರರು ರಾತ್ರೋ ರಾತ್ರಿ ಬಂದು ನಮ್ಮನ್ನು ಬೆದರಿಸಿ ನಮ್ಮ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ 25ಸಾವಿರ ಹಣವನ್ನು ಕಸಿದುಕೊಂಡಿದ್ದಾರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಲ್ಲೆಗೊಳಗಾದ ವ್ಯಕ್ತಿ ಮಧುಸೂದನ್ ಒತ್ತಾಯಿಸಿದ್ದಾರೆ.     ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಏಪ್ರಿಲ್ 06ರಂದು ರಂದು ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯನ್ನು ಕೆ ಆರ್ ಎಸ್ […]

Continue Reading

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ: ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧ ಅವರು ತಿಳಿಸಿದ್ದಾರೆ.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಕ್ಯಾನ್ಸರ್ ಸೇರಿದಂತೆ ಇತರ […]

Continue Reading

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ : ವದಂತಿಗಳಿಗೆ ಕಿವಿಗೊಡಬೇಡಿ :ಸಾರ್ವಜನಿಕರಿಗೆ ಕರೆ

ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ.   ​ಕೆಲವು ಖಾಸಗಿ ಆಟೋ ಗ್ಯಾಸ್ […]

Continue Reading

ಫಾಕ್ಸ್ಕಾನ್ ಕಂಪನಿಯ ಸಿ ಇ ಆರ್ (CER) ಯೋಜನೆಯಡಿಯಲ್ಲಿ ಉದ್ಯಾನವನ ನಿರ್ಮಾಣ : ಪಾರ್ಕ್ ಉದ್ಘಾಟಿಸಿ ಶುಭ ಹಾರೈಸಿದ ಗಣ್ಯರು

ದೊಡ್ಡಬಳ್ಳಾಪುರ : ನಗರದ 7ನೇ ವಾರ್ಡ್ ಕೆಂಪೇಗೌಡ ನಗರದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪರಿಸರ ಉದ್ಯಾನವನ ಲೋಕಾರ್ಪಣೆ ಮಾಡಲಾಯಿತು.   ಫಾಕ್ಸ್ಕಾನ್ ಕಂಪನಿಯ ಸಿ ಇ ಆರ್ (CER) ಯೋಜನೆಯಡಿ ಸುಮಾರು 5ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಉದ್ಯಾನವನವನ್ನು ತಾಲ್ಲೂಕಿನ ಶಾಸಕ ಧೀರಜ್ ಮುನಿರಾಜು, ನಗರಸಭೆ ಪೌರಯುಕ್ತ ಕಾರ್ತಿಕೇಶ್ವರ್, ನಗರಸಭೆ ಉಪಾಧ್ಯಕ್ಷ ಮಲ್ಲೇಶ್ ಹಾಗೂ ಫಾಕ್ಸ್ಕಾನ್ ಕಂಪನಿಯ ಅಧಿಕಾರಿಗಳು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಸ್ಥಳೀಯ ಸದಸ್ಯ ಹಾಗೂ ನಗರಸಭೆ ಉಪಾಧ್ಯಕ್ಷ ಮಲ್ಲೇಶ್ ಮಾತನಾಡಿ ಸಾರ್ವಜನಿಕರಿಗೆ […]

Continue Reading

ಪಾಲನಜೋಗಿಹಳ್ಳಿಯಲ್ಲಿ ನಿಲ್ಲದ ರಸ್ತೆ ಅಪಘಾತ : ಮತ್ತೆ ಆಕ್ಸಿಡೆಂಟ್ ಮಹಿಳೆಗೆ ಕಾಲು ಮುರಿತ 

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯಲ್ಲಿ ನಿನ್ನೆತಾನೇ ಕೆಎಸ್ ಆರ್ ಟಿಸಿ ಬಸ್ ಹರಿದು ಯುವಕ ಮೃತಪಟ್ಟಿದ್ದರು ಇಂದುಮತ್ತೆ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದೆ ಈ ಅಪಘಾತದಲ್ಲಿ ಮಹಿಳೆಯ ಕಾಲು ಮುರಿದಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಹೌದು ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ರಸ್ತೆಯಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾದಂತಿದೆ ಯಲಹಂಕ-ಹಿಂದೂಪುರ ರಸ್ತೆಯ ಪಾಲನಜೋಗಿಹಳ್ಳಿಯ ಗಣೇಶ್ ದೇವಸ್ಥಾನದ ಮುಂಭಾಗ ಈ ಘಟನೆ ಸಂಭವಿಸಿದ್ದು ಮಜಾನ್ ಬಿ (55) ಗಾಯಗೊಂಡ ಮಹಿಳೆ, ಬೈಕ್ ಆಟೋ ಮತ್ತು ಮಹಿಳೆಗೆ […]

Continue Reading

ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ : ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ಏಪ್ರಿಲ್ 5 ರ ಭಾನುವಾರದಂದು ತೂಬಗೆರೆ ಸರ್ಕಾರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ತಿಳಿಸಿದರು.   ಕಾರ್ಯಕ್ರಮ ಕುರಿತು ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ […]

Continue Reading