ದೊಡ್ಡಬಳ್ಳಾಪುರ : ತಾಲೂಕಿನ ತೂಬಗೆರೆ ಹೋಬಳಿಯ ಹಾಡೊನಹಳ್ಳಿ ಗ್ರಾಮದ ಸರ್ವೆ ನಂಬರ್ 89ರಲ್ಲಿ 31 ಗುಂಟೆ ಸರ್ಕಾರಿ ಗೋಮಾಳ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟುತ್ತಿರುವ ಕಟ್ಟಡವನ್ನು ತೆರವುಗೊಳಿಸಿ, ಸದರಿ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಣಕ್ಕೆ ಮಾಡಬೇಕು ಎಂದು ಕರ್ನಾಟಕ ದಲಿತ ಸಂರಕ್ಷಣಾ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿ. ಮಂಜುನಾಥ್ ಅಗ್ರಹಿಸಿದರು.

ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮದ ಸರ್ವೇ ನಂಬರ್ 89ರಲ್ಲಿ 31 ಗುಂಟೆ, ಗೋಮಾಳ ಜಾಗವಿದ್ದು ಆ ಜಾಗವನ್ನು ಸರ್ಕಾರದ ಯಾವುದೇ ಅನುಮತಿ ಇಲ್ಲದೆ ಯಾವುದೇ ದಾಖಲಾತಿಗಳು ಇಲ್ಲದೆ ಅಕ್ರಮವಾಗಿ ಅರ್ಕಾವತಿ ರೈತ ಉತ್ಪಾದಕರ ಕಂಪನಿ ಲಿಮಿಟೆಡ ಖಾಸಗಿ ಕಂಪನಿಯವರು ಅಕ್ರಮವಾಗಿ ಕಟ್ಟಡ ಕಟ್ಟಿದ್ದಾರೆ ಎಂದು ಆರೋಪಿಸಿದರು.

ಈ ಕೂಡಲೇ ಅಧಿಕಾರಿಗಳು ಸಂಬಂಧಪಟ್ಟ ಸ್ಥಳದ ದಾಖಲಾತಿಗಳನ್ನು ಪರಿಶೀಲಿಸಿ ಒತ್ತುವರಿ ತೆರುವುಗೊಳಿಸಿ ಸದರಿ 31 ಕುಂಟೆ ಸರ್ಕಾರಿ ಗೋಮಾಳ ಜಾಗದಲ್ಲಿ ಹಾಡೊನಹಳ್ಳಿನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ದಲಿತ ಸಂಘಟನೆಗಳ ಒತ್ತಾಯದ ಮೇರೆಗೆ ಸದರಿ ಜಾಗವನ್ನು 10 ದಿನಗಳ ಒಳಗಾಗಿ ಅಂಬೇಡ್ಕರ್ ಭವನಕ್ಕೆ ಮೀಸಲಿಡಬೇಕೆಂದು ಮನವಿ ಮಾಡಿದರು.

ಸ್ಥಳೀಯವಾಗಿ ಅಂಬೇಡ್ಕರ್ ಭವನ ನಿರ್ಮಾಣ ಮಾಡುವುದರಿಂದ ಹಾಡೋನಹಳ್ಳಿ ಅಷ್ಟೇ ಅಲ್ಲದೆ ತೂಬಗೆರೆ ಹೋಬಳಿಯ ಎಲ್ಲಾ ಗ್ರಾಮಗಳ ಬಡ ಸಮುದಾಯಗಳ ಶುಭ ಸಮಾರಂಭಗಳಿಗೆ ಅನುಕೂಲವಾಗಲಿದೆ. ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಂಡು ಒತ್ತುವರಿ ಜಾಗವನ್ನು ತೆರವುಗೊಳಿಸಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಈ ವೇಳೆ ಕರ್ನಾಟಕ ದಲಿತ ಸಂರಕ್ಷಣಾ ಸೇನೆ ರಾಜ್ಯ ಉಪಾಧ್ಯಕ್ಷ ಕೆ. ಗುರುಪ್ರಸಾದ್,ರಾಜ್ಯ ಮುಖ್ಯ ಕಾರ್ಯದರ್ಶಿ ಮಾರಪ್ಪ,ರಾಜಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಮುರುಳಿ, ರಾಜ್ಯ ಕಾರ್ಯದರ್ಶಿ ವೆಂಕಟರಾಜು,ರಾಜ್ಯ ಕಾರ್ಯಧ್ಯಕ್ಷ ಸಿದ್ದರಾಜು , ರಾಜ ಕಾರ್ಯದರ್ಶಿ ಮದ್ದೂರಪ್ಪ, ರಾಜ್ಯ ಖಜಾಂಚಿ ಟಿ ಎನ್ ನಾಗರಾಜು, ರಾಜ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್,ಗಂಗರಾಜು,ಕೃಷ್ಣಚಾರ್ಯ ಬೆಂಗಳೂರು ಗ್ರಾಮಾಂತರ ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಲಕ್ಷ್ಮಮ್ಮ, ಜನಪರ ಒಕ್ಕೂಟದ ರಾಜ್ಯಾಧ್ಯಕ್ಷರು ನಂಜುಂಡಪ್ಪ,ಮುಖಂಡರಾದ ಸುಗ್ರೀವಪ್ಪ ,ವಸಂತಪ್ಪ ಸೇರಿದಂತೆ ಸ್ಥಳೀಯ ದಲಿತ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.
