2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳು ಮತ್ತು ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ 6,7, 8 ಮತ್ತು 9ನೇ ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಮೌಲಾನಾ ಆಜಾದ್ ಮಾದರಿ ಶಾಲೆಗಳು ಮತ್ತು ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಿಗೆ ಸೇರಲು ಬಯಸುವ, ಆಸಕ್ತ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ. ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳು ವೆಬ್ಸೈಟ್ ಮೂಲಕ https://sevasindhuservices.Karnataka.gov.in/ ಅರ್ಜಿ ಸಲ್ಲಿಸಬಹುದು. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ದಾಖಲಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೌಲಭ್ಯಗಳನ್ನು ಒದಗಿಸಲಾಗುತ್ತೆ.
Ad
ಹೆಚ್ಚಿನ ವಿವರಗಳಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ :https://dom.karnataka.gov.in , ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಜೀರಸಂದ್ರ ಗ್ರಾಮ, ಕುಂದಾಣ ಹೋಬಳಿ. ದೇವನಹಳ್ಳಿ-562110, ದೂರವಾಣಿ ಸಂಖ್ಯೆ- 080-29787455.
ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ, ದೇವನಹಳ್ಳಿ ತಾಲ್ಲೂಕು, ದೊಡ್ಡಬಳ್ಳಾಪುರ ತಾಲ್ಲೂಕು. (ಮುತ್ತೂರು), ನೆಲಮಂಗಲ ತಾಲ್ಲೂಕು (ಇಸ್ಲಾಂಪುರ), ಹೊಸಕೋಟೆ ತಾಲ್ಲೂಕು. (ಹೊಸಕೋಟೆ ಟೌನ್) ದೂರವಾಣಿ ಸಂಖ್ಯೆ – 9066296080, 9743239154, 9019847874. 9742998287.
ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳು, ವಿಜಯಪುರ, ದೊಡ್ಡಬಳ್ಳಾಪುರ. ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು. ದೂರವಾಣಿ ಸಂಖ್ಯೆ-080-27682882, 27627444, 27931899, 27725445, 8317403213. ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ : 8277799990 ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
