ಜಿಲ್ಲಾಡಳಿತ ಭವನದಲ್ಲಿ ಬಸವಣ್ಣ ಹಾಗೂ ಶಂಕರಾಚಾರ್ಯರ ಜಯಂತಿ ಆಚರಣೆ 

Spread the love

ಬಸವ ಜಯಂತಿ ಹಾಗೂ ಶಂಕರಾಚಾರ್ಯರ ಜಯಂತಿ ಪ್ರಯುಕ್ತ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಬಸವಣ್ಣನವರ ಕಂಚಿನ ಪ್ರತಿಮೆ ಮಂಟಪದ ಬಳಿ ಜಗಜ್ಯೋತಿ ಬಸವಣ್ಣನವರ ಹಾಗೂ ಜಗದ್ಗುರು ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಕೆ. ಎನ್ ಅನುರಾಧ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

Ad

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾಯಕಯೋಗಿ ಬಸವಣ್ಣನವರ 893ನೇ ಜಯಂತಿ ಹಾಗೂ ಶಂಕರಾಚಾರ್ಯರ 1238 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

 

ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಬೆಳ್ಳಾವಿ ಮಠದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ, ದೊಡ್ಡಬಳ್ಳಾಪುರದ ಖಾನಿ ಮಠದ ಬಸವರಾಜ ಸ್ವಾಮೀಜಿ, ಸಮಾಜದ ಮುಖಂಡರಾದ ಜಗದೀಶ್, ಮಂಜುನಾಥ್, ವಿರೂಪಾಕ್ಷ, ಅಣ್ಣಪ್ಪ, ಶಾಂತ ಮೂರ್ತಿ, ರಮೇಶ್, ನಾಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.