ಕೆಪಿಸಿಸಿ ವತಿಯಿಂದ ಕಾರ್ಮಿಕರ ದಿನಾಚರಣೆಗೆ ಸಿದ್ಧತೆ : ಕಾರ್ಯಕ್ರಮ ಯಶಸ್ವೀಗೊಳಿಸಲು ತಾಲ್ಲೂಕು ಕಾಂಗ್ರೆಸ್ ಪೂರ್ವಭಾವಿ ಸಭೆ

Spread the love

ದೊಡ್ಡಬಳ್ಳಾಪುರ : ಮೇ 1ರ ವಿಶ್ವ ಕಾರ್ಮಿಕ ದಿನಾಚರಣೆಯಂದು ರಾಜ್ಯ ಸರ್ಕಾರದ ವತಿಯಿಂದ ಕಾರ್ಮಿಕರಿಗಾಗಿ ಕೆಪಿಸಿಸಿ ಆದೇಶದ ಮೇರೆಗೆ ಭಾರತ್ ಜೋಡೋ ಭವನದಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮಕ್ಕೆ ತಾಲ್ಲೂಕಿನ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವೀಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಮಿಕ ಘಟಕ ರಾಜ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ಜಿಲ್ಲಾಉಸ್ತುವಾರಿಗಳಾದ ಹರೀಶ್ ಚಕ್ರವರ್ತಿ ತಿಳಿಸಿದರು.

ಕಾರ್ಮಿಕರ ದಿನಾಚರಣೆಯ ವಿಶೇಷ ಕಾರ್ಯಕ್ರಮ ಕುರಿತು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು ತಾಲ್ಲೂಕಿನ ಹೋಬಳಿ ಹಾಗೂ ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆಗಳನ್ನು ಕುರಿತು ಅರಿವು ಮೂಡಿಸುವ ಕಾರ್ಯ ಪದಾಧಿಕಾರಿಗಳಿಂದ ಆಗಬೇಕಿದೆ . ಕಾರ್ಮಿಕರ ಸಮಸ್ಯೆಗಳಿಗೆ ಶೀಘ್ರಗತಿಯಲ್ಲಿ ಸ್ಪಂದಿಸುವ ಮೂಲಕ ಕಾರ್ಮಿಕರ ಒಳಿತಿಗೆ ಪದಾಧಿಕಾರಿಗಳುಶ್ರಮಿಸಬೇಕು ಅಲ್ಲದೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಸ್ಥಳೀಯ ನಾಯಕರಿಗೆ ಶಕ್ತಿ ತುಂಬಲು ಕಾರ್ಮಿಕ ಘಟಕ ಮುಂದಾಗಬೇಕು ಎಂದರು.

Ad

 

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ (ಅಪ್ಪಿ ) ಮಾತನಾಡಿ ತಾಲ್ಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ನರಸಿಂಹಮೂರ್ತಿ ರವರನ್ನು ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಬೂತ್ ಮಟ್ಟದಲ್ಲಿ ನಾವೆಲ್ಲರೂ ಹೆಚ್ಚಿನ ಶ್ರಮವಹಿಸಿ ಪಕ್ಷ ಸಂಘಟನೆ ಮಾಡುವಲ್ಲಿ ಕಾರ್ಯ ಪ್ರವೃತ್ತರಾಗಬೇಕು. ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇದ್ದು , ಪಕ್ಷಕ್ಕೆ ನೂತನವಾಗಿ ಸೇರ್ಪಡೆಯಾಗುವ ನೂತನ ಸದಸ್ಯರ ಜೊತೆಗೂಡಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಕಾರ್ಮಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೂತನ ಅಧ್ಯಕ್ಷರು ಕಾರ್ಯ ಪ್ರವೃತ್ತರಾಗಬೇಕು ಎಂದರು.

 

Ad

ಕಾರ್ಮಿಕ ಘಟಕದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಚಂದ್ರೇಗೌಡ ಮಾತನಾಡಿ ನಮ್ಮ ತಾಲ್ಲೂಕಿನಲ್ಲಿ ಕಾರ್ಮಿಕ ಘಟಕವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಸಂಘಟನೆಯಲ್ಲಿ ಚತುರರಾಗಿರುವ ನರಸಿಂಹಮೂರ್ತಿ ರವರನ್ನು ನೂತನ ತಾಲ್ಲೂಕು ಅಧ್ಯಕ್ಷರಾನ್ನಾಗಿ ಆಯ್ಕೆ ಮಾಡಿ ಜವಾಬ್ದಾರಿ ನೀಡಲಾಗಿದೆ ಇಂದು ನಮ್ಮ ತಾಲ್ಲೂಕಿನಲ್ಲಿ ಅಧಿಕಾರ ಇಲ್ಲದೆ ಇರಬಹುದು ಆದರೆ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಂಡಿತ ಈ ನಿಟ್ಟಿನಲ್ಲಿ ಎಲ್ಲಾ ಘಟಕದ ಪದಾಧಿಕಾರಿಗಳು ಒಗ್ಗಟ್ಟಗಿ ಕಾರ್ಯ ನಿರ್ವಹಿಸಬೇಕು ಕಾರ್ಮಿಕರನ್ನು ಹೆಚ್ಚಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದರು.

ನೂತನ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ನನ್ನನು ಗುರುತಿಸಿ ನನಗೆ ನೀಡಿರುವ ಜವಾಬ್ದಾರಿಯನ್ನು ಶ್ರದ್ದೆಯಿಂದ ನಿಭಾಯಿಸುತ್ತೇನೆ. ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಅತೀ ಹೆಚ್ಚು ಜನರು ತೆರಳಲಿದ್ದೇವೆ ಎಂದರು.

ಈ ವೇಳೆ ಜಿಲ್ಲಾ ಕಾರ್ಯಧ್ಯಕ್ಷ ಶಂಕರ್, ನಗರ ಬ್ಲಾಕ್ ಅಧ್ಯಕ್ಷರು ರಾಮಾಂಜಿನಪ್ಪ .ಶಶಿಕಿರಣ್ ಆರ್, ಪ್ರಧಾನ ಕಾರ್ಯದರ್ಶಿ ಜಿ.ರಂಗ ಸ್ವಾಮಿ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಸದಸ್ಯರಾದ ಆಟೋ ನಂಜಪ್ಪ, ಸೇರಿದಂತೆ, ಕಾರ್ಯದರ್ಶಿಗಳಾದ ಪ್ರಭುಚಂದ್ರ ಹಾಗೂ ಬಾಬು ಸದಸ್ಯರುಗಳು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

 

 

 

 

Leave a Reply

Your email address will not be published. Required fields are marked *

© 2026 Malnad TV. All Rights Reserved.