ರೈತರ ಜಾಗೃತಿಗಾಗಿ KRS ಪಕ್ಷದ ರೈತ ಚೈತನ್ಯ ಯಾತ್ರೆ

Spread the love

ಗಂಗಾವತಿ : ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ರೈತ ಘಟಕದ ವತಿಯಿಂದ ಗಂಗಾವತಿ ತಾಲೂಕಿನಲ್ಲಿ ರೈತರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ “ರೈತ ಚೈತನ್ಯ ಯಾತ್ರೆ” ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆಯಿತು.

Ad

ಯಾತ್ರೆಗೆ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ನಂತರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಯಾತ್ರೆ ಸಾಗುತ್ತಿದ್ದು, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ.

Ad

ಈ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ರೈತರ ಸಂಕಷ್ಟಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು,ಬೆಳೆಗಳಿಗೆ ನ್ಯಾಯಸಮ್ಮತ ಬೆಲೆ, ನೀರಾವರಿ ಸೌಲಭ್ಯ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಿಸುವುದಾಗಿದೆ. ಯಾತ್ರೆಯ ವೇಳೆ ಕೃಷಿ ಕ್ಷೇತ್ರದ ಸಮಸ್ಯೆಗಳ ಕುರಿತು ವಿವರವಾಗಿ ಚರ್ಚಿಸಲಾಗುತ್ತಿದ್ದು,ರೈತರನ್ನು ಸಂಘಟಿತವಾಗಿ ಹೋರಾಟಕ್ಕೆ ಸಜ್ಜುಗೊಳಿಸಲಾಗುತ್ತಿದೆ.

KRS ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ರೈತ ಸಮುದಾಯದಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿಯೂ ಯಾತ್ರೆ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮುಂದುವರಿಯಲಿದೆ.

 

ಈ ಯಾತ್ರೆಯಲ್ಲಿ ಎಲ್ಲಾ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ, ರೈತರ ಹಕ್ಕುಗಳ ಹೋರಾಟವನ್ನು ಬಲಪಡಿಸಲು ಸಹಕರಿಸುವಂತೆ KRS ಪಕ್ಷ ವಿನಂತಿಸಿದರು.

 

ಇದೇ ಸಂದರ್ಭದಲ್ಲಿ ಕನಕಪ್ಪ ಉಡೆಜಾಲಿ, ಕೊಪ್ಪಳ ಜಿಲ್ಲಾ ಸಂಚಾಲಕರಾದ ಗಣೇಶ್ ಅಮೃತ್, ಮೈನುದ್ದೀನ್, ಗಣೇಶ್ ಸಾರಂಗಿ, ಗಂಗಾವತಿ ತಾಲೂಕು ಅಧ್ಯಕ್ಷರಾದ ಶಾಮೀದ್ ಅಲಿ ಹುಲಿಹೈದರ, ಉಪಾಧ್ಯಕ್ಷರಾದ ನಾಗಪ್ಪ ಕಂಬಳಿ,ಕಾರ್ಯದರ್ಶಿಗಳಾದ ಮುದಿಯಪ್ಪ,ಮೆಹಬೂಬ್, ಬಸವರಾಜ,ಮಹಮ್ಮದ್ ಹುಸೇನ್, ಗಣೇಶ್ ಶಿಂಧೆ ಸೇರಿದಂತೆ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.