ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ 

Spread the love

ಬೆಂಗಳೂರು ಗ್ರಾಮಾಂತರ : ಭಗೀರಥ ಮಹರ್ಷಿಗಳು ನಿರಂತರ ತಪಸ್ಸು ಮಾಡಿ, ಗಂಗೆಯನ್ನು ಧರೆಗೆ ಕರೆ ತರುವಲ್ಲಿ ಯಶಸ್ವಿಯಾದರು. ಅವರ ಆದರ್ಶಗಳು ಪಾಲಿಸುತ್ತಾ, ಇಂದಿನ ಯುವ ಸಮೂಹ ನಿರಂತರ ಓದು ರೂಡಿಸಿಕೊಂಡು ಯಶಸ್ವಿ ಸಾಧಕರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

Ad

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ಭಗೀರಥರ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

 

ಯಶಸ್ಸು ಯಾರ ಸ್ವತ್ತು ಅಲ್ಲ, ನಿರಂತರ ಪ್ರಯತ್ನ ಪಡುವ ವ್ಯಕ್ತಿಯನ್ನು ಹುಡುಕಿಕೊಂಡು ಬರುತ್ತದೆ. ಪ್ರತಿಯೊಬ್ಬರೂ ಮಹನೀಯರ ಆದರ್ಶ ಹಾಗೂ ಮೌಲಿಕ ಜೀವನವನ್ನು ರೂಡಿಸಿಕೊಳ್ಳಬೇಕಿದೆ ಎಂದರು.

Ad

ಈ ಸಂದರ್ಭದಲ್ಲಿ ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸಮಾಜದ ಇಬ್ಬರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು, ವಿವಿಧ ಸಂಘಟನೆಯವರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.