ವರನಟ ಡಾ.ರಾಜ್ ಕುಮಾರ್ ಅವರಿಗೆ ಕೇಂದ್ರ‌ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡುವಂತೆ ಅಭಿಮಾನಿಗಳ ಒತ್ತಾಯ 

Spread the love

ದೊಡ್ಡಬಳ್ಳಾಪುರ : ವರನಟ ಡಾ.ರಾಜ್ ಕುಮಾರ್ ಅವರಿಗೆ ಕೇಂದ್ರ‌ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಬೇಕೆಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಡಾ.ರಾಜ್ ಕುಮಾರ್ ಅಭಿಮಾನಿಗಳು ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

Ad

ದೊಡ್ಡಬಳ್ಳಾಪುರ ನಗರದ ಡಾ.ರಾಜ್ ಕುಮಾರ್ ಪುತ್ಥಳಿ ಮುಂಭಾಗ ಕನ್ನಡ ಸಾಹಿತ್ಯ ಪರಿಷತ್ತು, ಡಾ.ರಾಜ್ ಕುಮಾರ್ ಅಭಿಮಾನಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ನಡೆದ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ ಕುಮಾರ್ ಅವರಿಗೆ ಭಾರತರತ್ನ ನೀಡಬೇಕೆಂದು ಸಹಿ ಸಂಗ್ರಹಣಾ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.

 

ಕನ್ನಡಪರ ‌ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ  ವರನಟ ಡಾ.ರಾಜಕುಮಾರ್ ಅವರಿಗಿದ್ದ ಬದ್ಧತೆ ಅವರನ್ನು ಕನ್ನಡಿಗರ ಹೃದಯದಲ್ಲಿ ವಿಶೇಷ ಸ್ಥಾನ ಪಡೆಯುಂತೆ ಮಾಡಿದೆ.

Ad

ದೊಡ್ಡಬಳ್ಳಾಪುರ ತಾಲ್ಲೂಕಿನೊಂದಿಗೆ ಡಾ.ರಾಜ್ ಕುಮಾರ್ ಉತ್ತಮ ಬಾಂಧವ್ಯವನ್ನು ಹೊಂದಿದ್ದರು. ಕನ್ನಡಿಗರಲ್ಲಿ ‌ಕನ್ನಡ ನಾಡು ನುಡಿಯ ಪ್ರಜ್ಞೆ ಜಾಗೃತಗೊಳಿಸಿದರು. ಗೋಕಾಕ್ ಚಳುವಳಿ ನೇತೃತ್ವವಹಿಸಿ ಹೋರಾಟಕ್ಕೆ ಶಕ್ತಿ ತುಂಬಿದರು ಎಂದರು.

 

ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ಶ್ರೀರಾಮ್ ಮೆಲೋಡಿಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನದಾನ ಮತ್ತು ಸಿಹಿ ಹಂಚಿಕೆ ಡಾ.ರಾಜ್ ಕುಮಾರ್ ಅಭಿಮಾನಿಗಳಿಂದ ನಡೆಯಿತು.

Ad

ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ ನಾಯಕ್ ಮಾತನಾಡಿ, ಅಪ್ರತಿಮ ಕಲಾವಿದರಾಗಿ ಎಲ್ಲಾ ಜನರ ಪ್ರೀತಿಗೆ ಪಾತ್ರರಾದ ಡಾ.ರಾಜ್‌ಕುಮಾರ್ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ ಡಾ. ರಾಜ್‌ಕುಮಾರ್ ಅವರು ಕನ್ನಡ ಭಾಷೆ, ಸಂಸ್ಕೃತಿ ಮತ್ತು ನೆಲ-ಜಲದ ಬಗ್ಗೆ ಅಪಾರ ಗೌರವ ಹೊಂದಿದ್ದರು. ಅವರು  ತಮ್ಮ  ಚಲನಚಿತ್ರಗಳ ಮೂಲಕ ಕನ್ನಡ ಭಾಷೆ ಮತ್ತು ಸಾಹಿತ್ಯದ  ಸೊಬಗನ್ನು ಪಸರಿಸಿದರು ಎಂದರು.

 

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜಘಟ್ಟ ರವಿ, ಮರುಳಾರಾಧ್ಯ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ. ಪಿ. ಆಂಜನೇಯ, ಡಾ.ರಾಜ್ ಅಭಿಮಾನಿ ಸಂಘದ ಅಧ್ಯಕ್ಷ ಸು. ನರಸಿಂಹಮೂರ್ತಿ, ಶಿವರಾಜ್ ಅಭಿಮಾನಿ ಸಂಘದ ರಮೇಶ್, ಚೌಡರಾಜ್, ಪರಮೇಶ್, ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ನವೀನ್ ದೇವ್, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ. ಜಯರಾಮ, ಕೋಶಾಧ್ಯಕ್ಷ ಜಿ. ಸುರೇಶ್, ನಿಕಟಪೂರ್ವ ಅಧ್ಯಕ್ಚೆ ಪ್ರಮೀಳಾ ಮಹದೇವ್, ಪ್ರತಿನಿಧಿ ಅಣ್ಣಯ್ಯ ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ, ಸಫೀರ್, ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು.

 

 

Leave a Reply

Your email address will not be published. Required fields are marked *

© 2026 Malnad TV. All Rights Reserved.