ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್ ಹಾಗೂ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
Ad
ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿತವಾಗಿ ಬಲಪಡಿಸುವಲ್ಲಿ ಹರೀಶ್ ಗೌಡ ಅವರು ಪ್ರಮುಖ ಪಾತ್ರವಹಿಸುವರೆಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.
Ad
ನೂತನ ಅಧ್ಯಕ್ಷ ಹರೀಶ್ ಗೌಡ ಮಾತನಾಡಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ ಎಲ್ಲಾ ಜೆಡಿಎಸ್ ಮುಖಂಡರಿಗೂ ನನ್ನ ಹೃತ್ತೂರ್ವಕ ಅಭಿನಂದನೆಗಳು ತಿಳಿಸುತ್ತೇನೆ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸಲು ಪಕ್ಷ ಸಂಘಟನೆಗೆ ಹೆಚ್ಚಿನ ಪ್ರಮುಖ್ಯತೆ ನೀಡುವ ಮೂಲಕ ಮುಂದಿನ ಸ್ಥಳೀಯ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಯೋಜನೆ ರೂಪಿಸಿ ಶ್ರಮಿಸುವುದಾಗಿ ಪಕ್ಷದ ವರಿಷ್ಟರ ಮಾರ್ಗದರ್ಶನದೊಂದಿಗೆ ಪಕ್ಷವನ್ನು ಮೊನ್ನೆಡೆಸುವುದಾಗಿ ತಿಳಿಸಿದರು.
ನೂತನ ಪದಾಧಿಕಾರಿಗಳ ಪಟ್ಟಿ ಇಂತಿದೆ:-
ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ನೂತನ ಅಧ್ಯಕ್ಷರಾಗಿ ಎಸ್ಎಂ ಹರೀಶ್ ಗೌಡ, ತಾಲೂಕು ಕಾರ್ಯಾಧ್ಯಕ್ಷರಾಗಿ ವಕೀಲರಾದ ಅಂಜನ್ ಗೌಡ, ತಾಲೂಕು ಉಪಾಧ್ಯಕ್ಷರಾಗಿ ಕೊನಘಟ್ಟ ಆನಂದ್, ಉಜನಿಹೊಸಹಳ್ಳಿ ಪುಟ್ಟರಾಜು ಹಾಗೂ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಬಿ. ಗೋವಿಂದರಾಜು ಮಂಡಿಬ್ಯಾಡರ ಹಳ್ಳಿ ಅವರನ್ನು ರಾಜ್ಯ ಜೆಡಿಎಸ್ ನ ಪೋರ್ ಕಮಿಟಿ ಅಧ್ಯಕ್ಷರಾದ ಜೆಕೆ ಕೃಷ್ಣಾರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಕೆ ವಿ ಮಂಜುನಾಥ್ ರವರ ಸಮ್ಮುಖದಲ್ಲಿ ಜೆಪಿ ಭವನದಲ್ಲಿ ನೇಮಕ ಮಾಡಲಾಗಿದೆ.
ನೂತನ ಅಧ್ಯಕ್ಷರಿಗೆ ಪಕ್ಷದ ಹಿರಿಯರು, ಕಾರ್ಯಕರ್ತರು ಮತ್ತು ಬೆಂಬಲಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ವೇಳೆ ಜೆಡಿಎಸ್ ರಾಜ್ಯ ಪ್ರಮುಖರಾದ ರಮೇಶ್ ಗೌಡ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್, ಸ್ಥಳೀಯ ಮುಖಂಡರಾದ ಅಂಜನ್ ಗೌಡ,ಶಾಂತಿನಗರ ಪ್ರವೀಣ್, ಶಿವಕುಮಾರ್ (ವೈರ್ ) ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.
