ಒಳಮೀಸಲಾತಿ ಅನುಷ್ಠಾನ ತೀರ್ಮಾನ : ಎಡಗೈ–ಬಲಗೈ ವಿವಾದಕ್ಕೂ ಇಂದಿನಿಂದ ಅಂತ್ಯ ನಾವೆಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ – ಆಹಾರ ಸಚಿವ ಕೆಹೆಚ್. ಮುನಿಯಪ್ಪ‌.

Spread the love

ಬೆಂಗಳೂರು : ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್ ಎ ಗೆ 5.25, ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನಿಸಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ‌ ತಿಳಿಸಿದರು.

Ad

ಈ ಕುರಿತು ಮಾತನಾಡಿದ ಅವರು, “ಇದು ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ. 40 ವರ್ಷಗಳ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ,” ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ ಬಸವಣ್ಣವರ ಸಮಾನತೆ ತತ್ವವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ ಎಂದು ಅಭಿಪ್ರಾಯಪಟ್ಟರು.

ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಮುಖ್ಯಮಂತ್ರಿಗಳ ಬದ್ಧತೆ ಇಂದು ಕಾರ್ಯರೂಪಕ್ಕೆ ಬಂದಿದೆ,” ಒಳ ಮೀಸಲಾತಿ ಜಾರಿ ಪ್ರಕ್ರಿಯೆಯಲ್ಲಿ ಕಾನೂನು ಸಚಿವರು, ಗೃಹ ಸಚಿವರು, ಹಾಗೂ ಮಹಾದೇವಪ್ಪ ಸೇರಿದಂತೆ ಹಲವು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ ಅಲ್ಲದೆ, ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರದಿಂದ ಇದು ಸಾಧ್ಯವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು.

 

ರಾಜ್ಯದ 101 ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ದಶಕಗಳ ಅನ್ಯಾಯಕ್ಕೆ ಅಂತ್ಯವಾಗಲಿದೆ “ಎಡಗೈ–ಬಲಗೈ ವಿವಾದಕ್ಕೂ ಇಂದಿನಿಂದ ಅಂತ್ಯ. ನಾವು ಎಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ,” ಎಂದು ಹೇಳಿದರು.

 

ಸಚಿವ ಸಂಪುಟದ ಈ ತೀರ್ಮಾನವನ್ನು ಸ್ವಾಗತಿಸಿದ ಮುನಿಯಪ್ಪ, “ಮುಖ್ಯಮಂತ್ರಿಗಳ ಕೈ ಬಲಪಡಿಸಿ, ಪಕ್ಷವನ್ನು ಮತ್ತಷ್ಟು ಬಲಪಡಿಸೋಣ,” ಎಂದು ಕರೆ ನೀಡಿದರು.

ಸುದ್ದಿ ಗೋಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಪರಮೇಶ್ವರ್,ಮಹದೇವಪ್ಪ ,ತಿಮ್ಮಾಪುರ, ಶಿವರಾಜ್ ತಂಗಡಗಿ,ಸುಧಾಕರ್,ಬೈರತಿ ಸುರೇಶ್,ಹೆಚ್.ಕೆ ಪಾಟೀಲ್,ಪ್ರಿಯಾಂಕ ಖರ್ಗೆ,ಕಾನೂನು ಸಲಹೆಗಾರ ಪೊಣ್ಣನ್ನ , ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.