ದೊಡ್ಡಬಳ್ಳಾಪುರ; ತಾಲ್ಲೂಕಿನ ESI ಆಸ್ಪತ್ರೆ ಮೇ 3 ರಂದು ಉದ್ಘಾಟನೆಯಾಗಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಕಳೆದ ಎರಡು ವರ್ಷಗಳಿಂದ ಆಸ್ಪತ್ರೆ ಉದ್ಘಾಟನೆ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗ- ಜಗ್ಗಾಟ ನಡೆಯುತ್ತಿತ್ತು, ಆದರೀಗ ಅಂತಿಮ ಹಂತಕ್ಕೆ ತಲುಪಿದ್ದು ಮೇ.3 ರಂದು ಆಸ್ಪತ್ರೆ ಉದ್ಘಾಟನೆಯಾಗಲಿದೆ ಎಂದರು.
Ad
ಕೇಂದ್ರ ಸಚಿವರಾದ ಮನ್ಸೂಕ್ ಮಾಂಡವೀಯ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ ಆಸ್ಪತ್ರೆ ಉದ್ಘಾಟನೆಯಾಗಲಿದ್ದು , ಈ ಕಾರ್ಯಕ್ರಮಕ್ಕೆ ರಾಜ್ಯದ ಸಚಿವರುಗಳು ಆಗಮಿಸುವ ಸಾಧ್ಯತೆ ಇದೆ ಎಂದರು.
ಕೇಂದ್ರ ESI ಕಾರ್ಪೋರೇಷನ್ ವತಿಯಿಂದ ವೈದ್ಯಾಧಿಕಾರಿಗಳು ಆಸ್ಪತ್ರೆಯ ಉಸ್ತುವಾರಿ ವಹಿಸಿಕೊಂಡು ಕಾರ್ಯೋನ್ಮುಖರಾಗಿದ್ದಾರೆ. ಇನ್ನು ಈ ಆಸ್ಪತ್ರೆಗೆ ವೈದ್ಯರನ್ನು ಮತ್ತು ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ.
ಮೇ. 3 ರ ನಂತರ ಮೊದಲಿಗೆ 40 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ವಾರ್ಷಿಕ ಆರೋಗ್ಯ ತಪಾಸಣೆ ಕಾರ್ಯ ನಡೆಯಲಿದ್ದು ಮುಂದಿನ ಒಂದು ತಿಂಗಳಲ್ಲಿ ಸಂಪೂರ್ಣ OPD ವಿಭಾಗದಲ್ಲಿ ಸರ್ಜನ್ ಗಳು ಕಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.
