
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.53,22,602 ಹಣ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದರೊಂದಿಗೆ ಹನ್ನೆರಡು ಸಾವಿರ ಮೌಲ್ಯದ ಚಿನ್ನ, 54,000 ರೂ ಮೌಲ್ಯದ 01 ಕೆಜಿ 500 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಹಾಕಲಾಗಿದೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಈ ಸಂದರ್ಭದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಹುಂಡಿ ಎಣಿಕೆಯ ವೇಳೆ ಮುಜರಾಯಿ ಇಲಾಖೆ ತಹಶೀಲ್ದಾರ್ ಜೆ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜು, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ಸಿಬ್ಬಂದಿ ನಂಜಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗ, ಭಕ್ತಾದಿಗಳು ಉಪಸ್ಥಿತರಿದ್ದರು