ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟ : ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಮೂಡಿಗೆರಿಸಿಕೊಂಡ ಕೊನಘಟ್ಟ ‘ಬಿ’ ತಂಡ 

Spread the love

ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊನಘಟ್ಟ ಗ್ರಾಮದ ಯುವಕರಿಂದ ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟವನ್ನು ಕಳೆದ ಮೂರು ದಿನಗಳಿಂದ ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ ‘ಬಿ’ ತಂಡ ಮುಡಿಗೇರಿಸಿಕೊಂಡಿತು.

ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 50 ಸಾವಿರ ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ, ಕುರಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.ರನ್ನರ್ ಅಪ್ತ  ತಂಡಕ್ಕೆ 30ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು.

Ad

ಬಹುಮಾನ ವಿತರಿಸಿ ಕೊನಘಟ್ಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ದೈಹಿಕ ಚಟುವಟಿಕೆಯ ಮುಂದುವರಿದ ಭಾಗವೇ ಕ್ರೀಡೆ, ಪ್ರತಿಯೊಬ್ಬರೂ ಚಿಕ್ಕವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಇಂದಿನ ಯುವಜನತೆಯು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು. ಮೊಬೈಲ್ ಜಗತ್ತಿನಿಂದ ಹೊರಬಂದು ಯಾವುದಾದರು ಒಂದು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರೆ ಆರೋಗ್ಯಕ್ಕೂ ಮಾನಸಿಕ ಒತ್ತಡಕ್ಕೂ ಒಳ್ಳೆಯ ಪರಿಹಾರ ಸಿಗಲಿದೆ ಎಂದರು.

ಈ ವೇಳೆ ಸಮಾಜಸೇವಕರು,ಕೊನಘಟ್ಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ನಾರಾಯಣಸ್ವಾಮಿ ಸ್ಥಳೀಯ ಮುಖಂಡರಾದ ರಮೇಶ್, ಸೋಮಶೇಖರ್, ಪಾಪೇಗೌಡ, ಮಂಜುನಾಥ, ಪುನೀತ್ ಮತ್ತಿತ್ತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.