ನಿರಂತರ ಅನ್ನದಾಸೋಹ ಸಮಿತಿ ಸಹಯೋಗದೊಂದಿಗೆ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ

ತಾಲೂಕು
Spread the love

ದೊಡ್ಡಬಳ್ಳಾಪುರ :ನಿರಾಶ್ರಿತ ಕಡು ಬಡವರಿಗೆ,ವೃದ್ಧರಿಗೆ ಆಹಾರ ವಿತರಣೆ ಮಾಡುವ ಮೂಲಕ ಇದು ನನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಸಮಾಜ ಸೇವಕರು ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆಯ ರಾಜ್ಯ ಕಾರ್ಯಧ್ಯಕ್ಷ ಹೆಚ್. ರಾಘವೇಂದ್ರ ತಿಳಿಸಿದರು.

ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 2233 ನೇ ದಿನದ ನಿರಂತರ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಸಿದವರಿಗೆ ಆಹಾರ ವಿತರಣೆ, ಶಾಲಾ ಮಕ್ಕಳಿಗೆ ಅಗತ್ಯ ಪರಿಕರ ಹಾಗೂ ವಯೋವೃದ್ಧರಿಗೆ ಬಟ್ಟೆ ವಿತರಣೆ ಮಾಡುವ ಮೂಲಕ ನಮ್ಮ ಕೈಲಾದ ಸೇವೆಯನ್ನು ಮಾಡುವ ಮೂಲಕ ವಿಶೇಷ ದಿನವನ್ನು ಸಂಭ್ರಮಿಸಿದ್ದೇವೆ. ಇಂದಿನ ಈ ಕಾರ್ಯಕ್ರಮ ಅತ್ಯಂತ ಸಂತೋಷ ತಂದಿದೆ ಎಂದರು.

ಕಾರ್ಯಕ್ರಮದ ಆಯೋಜಕ ಅನ್ನದಾಸೋಹಿ ಮಲ್ಲೇಶ್ ಮಾತನಾಡಿ ದಾನಿಗಳ ನೆರವಿನಿಂದ ಕಳೆದ 2233 ದಿನಗಳಿಂದ ನಿರಂತರವಾಗಿ ಅನ್ನದಾಸೋಹ ಕಾರ್ಯಕ್ರಮ ನಡೆಯುತ್ತಾ ಬಂದಿದೆ. ಇಂದು ಯುವ ನಾಯಕರು ಸಮಾಜ ಸೇವಕರಾದ ಎಚ್ ರಾಘವೇಂದ್ರ ಹಾಗೂ ಕುಟುಂಬಸ್ಥರು ತಮ್ಮ ವಿಶೇಷ ದಿನವನ್ನು ನಮ್ಮೊಂದಿಗೆ ಆಚರಿಸಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲಾ ದಾನಿಗಳಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Ad

ಈ ವೇಳೆ ಎಚ್. ಶಿವಕುಮಾರ್, ಎಚ್. ರಾಜು, ಮಂಜುನಾಥ್ ಸೇರಿದಂತೆ ಸ್ಥಳೀಯ ಪ್ರಮುಖರು, ನಿರಂತರ ಅನ್ನದಾಸೋಹ ಸಮಿತಿ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *