ಮೈಸೂರಿನ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವಿದ್ಯಾಸಂಸ್ಥೆಯಲ್ಲಿ 2026- 27ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Ad
ಅರ್ಜಿ ಸಲ್ಲಿಸಲು ಜೂನ್ 5 ಕೊನೆದಿನವಾಗಿದ್ದು, ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ – 40% ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ – 60 ಡಿಬಿ ಮತ್ತು ಮೇಲ್ಪಟ್ಟು, ಅಂಧತ್ವವನ್ನು – 6/60 ಅಥವಾ 20/200 ಸೈಲನ್ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರುವವರಾಗಿರಬೇಕು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.
Ad
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.jsspda.org ಅಥವಾ ದೂ. 98446 44937 ಮೂಲಕ ಸಂಪರ್ಕಿಸಲು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
