ಕೃಷಿ ಜಮೀನು ಸ್ವಾದೀನ ವಿರೋಧಿಸಿ KIADB ವಿರುದ್ಧ ರೈತರ ನಡೆಸುತ್ತಿರುವ ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ – ಎಚ್ ರಾಜ್ ಗೋಪಾಲ್ 

ಜಿಲ್ಲೆ ತಾಲೂಕು ರಾಜ್ಯ
Spread the love

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಸುತ್ತಮುತ್ತಲಿನ ಚಿಕ್ಕಬೆಳವಂಗಲ, ರಾಂಪುರ, ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ರೈತರ ಕೃಷಿ ಯೋಗ್ಯ ಭೂಮಿಯನ್ನು ಕೆಐಎಡಿಬಿ ಬಲವಂತವಾಗಿ ಪರಭಾರೆ ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟವದಿ ಧರಣಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ ಪ್ರಮುಖರು ಪಾಲ್ಗೊಂಡು ಬೆಂಬಲ ಸೂಚಿಸಿದರು.

Ad

ಈ ವೇಳೆ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ ರಾಷ್ಟ್ರೀಯ ಅಧ್ಯಕ್ಷ.ಡಾ. ಹೆಚ್ ರಾಜಗೋಪಾಲ್ ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ದೊಡ್ಡಬೆಳವಂಗಲ ಹೋಬಳಿಯ ಸೊಣ್ಣೇನಹಳ್ಳಿ, ರಾಂಪುರ, ಅಕ್ಕತಮ್ಮನಹಳ್ಳಿ, ನಾಗನಹಳ್ಳಿ, ದೊಡ್ಡ ಬೆಳವಂಗಲ,ಚಿಕ್ಕ ಬೆಳವಂಗಲ, ಸೇರಿದಂತೆ ಹಲವು ಗ್ರಾಮಗಳ ಸುಮಾರು 2100 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿ ವತಿಯಿಂದ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಈ ಭಾಗದ ರೈತಾಪಿ ವರ್ಗದವರು ಮತ್ತು ರೈತ ಸಂಘಟನೆಗಳು ನಮ್ಮನ್ನು ಸಂಪರ್ಕಿಸಿ ತಮ್ಮ ಅಳಲನ್ನು ತೋಡಿಕೊಂಡಿದ್ದು, ಅವರ ಹೋರಾಟಕ್ಕೆ ನಾವು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದರು.

Ad

ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಜಮೀನು ಅತ್ಯಂತ ಫಲವತ್ತಾಗಿದ್ದು ವರ್ಷದಲ್ಲಿ , ಮೂರು ಬೆಳೆ ತೆಗೆಯುವ ಕೃಷಿ ಭೂಮಿಯಾಗಿದೆ. ಇದರಿಂದ ನೂರಾರು ರೈತ ಕುಟುಂಬಗಳು ಜೀವನಕ್ಕೆ ಅಧಾರವಾಗಿದೆ. ಇಂತಹ ಭೂಮಿಯ ಸ್ವಾಧೀನದಿಂದ ರೈತರು ಬೀದಿಗೆ ಬೀಳಲಿದ್ದು, ಆಹಾರ ಭದ್ರತೆಗೆ ಧಕ್ಕೆಯಾಗಲಿದೆ. ಅಧಿಕಾರಿಗಳು ರೈತರಿಗೆ ನಿಮ್ಮ ಜಮೀನು ರಸ್ತೆಗೆ ಹೋಗುತ್ತವೆ ಎಂದು ತಪ್ಪು ಮಾಹಿತಿ ನೀಡಿ, ಭಯ ಹುಟ್ಟಿಸಿ ಭೂಮಿ ಕಬಳಿಸುವ ಹುನ್ನಾರ ನಡೆಸಿದ್ದಾರೆ. ಇದು ಖಂಡನೀಯ ಎಂದರು.

 

 

ಈ ಸಂದರ್ಭದಲ್ಲಿ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಮಂಡಳಿ ರಾಜ್ಯ ಕಾರ್ಯದರ್ಶಿ ದಿಲೀಪ್, ಕೋಲಾರ ಅಧ್ಯಕ್ಷ ವಿ.ಮುನಿರಾಜು, ಜಿಲ್ಲಾ ಕಾರ್ಯದರ್ಶಿ ಕೆ.ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರದ ಜಿಲ್ಲಾ ಅಧ್ಯಕ್ಷ ಹರಿ ಕೃಷ್ಣ,ಬೆಂಗಳೂರು ಪೂರ್ವ ವಲಯ ಅಧ್ಯಕ್ಷ ವಿಠ್ಠಲ್,ಬೆಂಗಳೂರು ಪೂರ್ವ ವಲಯ ಯುವ ಅಧ್ಯಕ್ಷ ಮೋಹನ್, ಕಾರ್ಯಕಾರಿ ಸಮಿತಿಯ ಸದಸ್ಯ ವೆಂಕಟರಾಮ್ ಹಾಗೂ ಭಾರತೀಯ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಮಂಡಳಿ ಪದಾಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.

Leave a Reply

Your email address will not be published. Required fields are marked *