
ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 7 ವಿದ್ಯಾರ್ಥಿಗಳು ರಾಷ್ಟೀಯ ಹಾಗೂ ರಾಜ್ಯ ಮಟ್ಟದ ವಿವಿಧ ಕ್ರೀಡೆಗಳಿಗೆ ಆಯ್ಕೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಅಭಿನಂದನೆ.
ತಾವು ಓದಿದ ಕಾಲೇಜಿನ ವಿಧ್ಯಾರ್ಥಿಗಳು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಿಗೆ ಆಯ್ಕೆಯಾಗಿರುವ ಸುದ್ದಿ ತಿಳಿದ ಹಳೆ ವಿಧ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್.ವಿ. ರವರು ಸಂಘದ ಪರವಾಗಿ ತಲಾ ಮೂರು ಸಾವಿರ ರೂಪಾಯಿಗಳ ಚೆಕ್ ಅನ್ನು 7 ವಿಧ್ಯಾರ್ಥಿಗಳಿಗೆ ನೀಡುವ ಮೂಲಕ ಕ್ರೀಡಾಪಟುಗಳು ಮುಂದೆ ತಾವು ಭಾಗವಹಿಸುತ್ತಿರುವ ಕ್ರೀಡೆಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಜಯಶೀಲರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕೀರ್ತಿ ತರಬೇಕೆಂದು ಹಾರೈಸಿದರು .
ಈ ಸಂದರ್ಭದಲ್ಲಿ ಹಳೆ ವಿಧ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಮಾತನಾಡಿ ನಾವು ವ್ಯಾಸಂಗ ಮಾಡಿದ ಕಾಲೇಜಿನ ವಿಧ್ಯಾರ್ಥಿಗಳು ಇಂದು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಿಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ ಅವರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕಿರು ಧನ ಸಹಾಯ ಮಾಡಲಾಗಿದೆ .ಕ್ರೀಡಾಪಟುಗಳ ಗೆಲುವಿನಿಂದ ನಮ್ಮ ತಾಲ್ಲೂಕಿಗೆ ಹಾಗೂ ನಾವು ವ್ಯಾಸಂಗ ಮಾಡಿದ ಕಾಲೇಜಿಗೆ ಕೀರ್ತಿ ಹೆಚ್ಚಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸದಾಶಿವ ರಾಮಚಂದ್ರ ಗೌಡ ರವರು. ಪ್ರಾಧ್ಯಾಪಕರಾದ ಶ್ರೀನಿವಾಸ್.ಹಾಗೂ ಹಳೆ ವಿಧ್ಯಾರ್ಥಿಗಳ ಸಂಘದ ಪದಾಧಿಕಾರಿಗಳಾದ ಮಮತ.ಎಸ್. ಶಾಂತ ಪಾಟೀಲ್.ಮಹೇಶ್.ಮಂಜುನಾಥ್