
ದೊಡ್ಡಬಳ್ಳಾಪುರ : ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ತಾಲ್ಲೂಕಿನ ಶ್ರೀ ನೆಲದಾಂಜನೆಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು , ಬೆಡ್ ಶೀಟ್ ಗಳನ್ನು ನೀಡುವ ಮೂಲಕ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಶ್ರೀ ಹರೀಶ್ ಗೌಡ ರವರ ನೇತೃತ್ವದ ತಂಡ ತಮ್ಮ ನೆಚ್ಚಿನ ನಾಯಕ ಕುಮಾರಸ್ವಾಮಿ ಯವರ ಹುಟ್ಟು ಹಬ್ಬವನ್ನು ಆಚರಿಸಿದರು .
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ ರಾಜ್ಯ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಕುಮಾರಸ್ವಾಮಿಯವರು ಕೂಡ ಒಬ್ಬರು ಇಂದಿಗೂ ರೈತರ ಧ್ವನಿಯಾಗಿ ರಾಜ್ಯದ ಮೂಲೆ ಮೂಲೆಯಲ್ಲೂ ಶ್ರಮಿಸುವ ಏಕೈಕ ನಾಯಕ ಅವರಾಗಿದ್ದಾರೆ . ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರಾಜ್ಯಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು ಸದಾ ಜನಪರ ಕಾಳಜಿಯನ್ನು ಹೊಂದಿರುವ ನಾಯಕ ನಮ್ಮ ಕುಮಾರಸ್ವಾಮಿಯವರು ನಮ್ಮೆಲ್ಲರ ಹಾರೈಕೆ ದೇವರು ಅವರಿಗೆ ಆರೋಗ್ಯದೊಂದಿಗೆ ಸಕಲ ಸೌಭಾಗ್ಯಗಳನ್ನು ನೀಡಿ ಆಶೀರ್ವದಿಸಲಿ ಎಂಬುದೇ ಆಗಿದೆ ಕುಮಾರಸ್ವಾಮಿಯವರು ಮತ್ತೊಮ್ಮೆ ನಮ್ಮ ರಾಜ್ಯದ ಮುಖ್ಯಮಂತ್ರಿ ಆಗಿ ರಾಜ್ಯದ ರೈತರಿಗೆ, ಜನಸಾಮಾನ್ಯರಿಗೆ ಮತ್ತಷ್ಟು ಉತ್ತಮ ಕೊಡುಗೆ ನೀಡಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯಣ್ಣ . ಹಿರಿಯ ಮುಖಂಡರಾದ ಕುರುವಿಗೆರೆ ನರಸಿಂಹಯ್ಯ. ಮಾಜಿ ನಗರ ಸಭೆ ಅಧ್ಯಕ್ಷರಾದ ತ.ನಾ.ಪ್ರಭಣ್ಣ ರವರು ಸ್ಥಾಯಿ ಸಮಿತಿ ಅಧ್ಯಕ್ಷರಾದ ರವಿಕುಮಾರ್ ರವರು. ಕೊನಘಟ್ಟ ಆನಂದ್ ರವರು, ಶಾಂತಿನಗರ ಪ್ರವೀಣ್ ಹಾಗೂ ತಾಲ್ಲೂಕಿನ ಹಲವು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು