ಕೋವಿಡ್ ಸೋಂಕಿಗೆ ಸ್ಟಾರ್ ನಟ ಬಲಿ: ಇಹಲೋಕ ತ್ಯಜಿಸಿದ ನಟ ವಿಜಯಕಾಂತ್

Spread the love

ಚೆನ್ನೈ : ತಮಿಳು‌ ಚಿತ್ರರಂಗದ ಖ್ಯಾತ‌ ನಟ, ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್(71) ಅವರು‌ ಗುರುವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಮೃತ ವಿಜಯಕಾಂತ್ ಅವರು ಪತ್ನಿ ಪ್ರೇಮಲತಾ ಮತ್ತು ಮಕ್ಕಳಾದ ಷಣ್ಮುಗ ಪಾಂಡಿಯನ್ ಮತ್ತು ವಿಜಯ ಪ್ರಭಾಕರನ್ ಅವರನ್ನು ಅಗಲಿದ್ದಾರೆ.

ನ್ಯುಮೋನಿಯಾದಿಂದ‌ ಬಳಲುತ್ತಿದ್ದ ವಿಜಯಕಾಂತ್ ಅವರಿಗೆ ಐಸಿಯುನಲ್ಲಿ‌ ಚಿಕಿತ್ಸೆ ನೀಡಲಾಗುತ್ತಿತ್ತು. ಇದೇ ವೇಳೆ ಕೋವಿಡ್ ಸೋಂಕು ದೃಢಪಟ್ಟಿದ್ದು ವೈದ್ಯಕೀಯ ಸಿಬ್ಬಂದಿಯ ಪ್ರಯತ್ನದ ಹೊರತಾಗಿಯೂ ಅವರು ಡಿ. 28 ರಂದು ಬೆಳಿಗ್ಗೆ ನಿಧನರಾದರು ಎಂದು ಮಿಯೋಟ್ ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯಕಾಂತ್ ಅವರು ಕಳೆದ 4-5 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಅವರ ಪತ್ನಿ ಪ್ರೇಮಲತಾ ಡಿ. 14 ರಂದು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿಯಾಗಿ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡಿದ್ದರು.

ವಿಜಯಕಾಂತ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ‌ ಅವರು ಸಂತಾಪ ಸೂಚಿಸಿದ್ದಾರೆ. ತಿರು ವಿಜಯಕಾಂತ್ ಅವರ ನಿಧನದಿಂದ ಅತೀವ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ನಾವೆಲ್ಲ ಅವರ ಕುಟುಂಬ ಹಾಗೂ ಅಭಿಮಾನಿಗಳ ಜೊತೆಗಿದ್ದೇವೆ ಎಂದು ಎಕ್ಸ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *