ದೊಡ್ಡಬಳ್ಳಾಪುರ : ಸಾರ್ವಜನಿಕರ ಹಲವು ಅಹವಾಲುಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ್ದೇನೆ ನ್ಯಾಯಾಲಯದಲ್ಲಿ ಇರುವ ದಾವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅರ್ಜಿಗಳನ್ನು ಸರಿಪಡಿಸುವ ಅವಕಾಶ ನಮ್ಮಲ್ಲಿದೆ ಸಾರ್ವಜನಿಕರು ತಾಲ್ಲೂಕು ಕಚೇರಿ ಅಥವಾ ಜಿಲ್ಲಾ ಕಚೇರಿಗಳಿಗೆ ಆಲೆಯುವ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳಲು ಈ ಕಾರ್ಯಕ್ರಮ ಅನುಕೂಲವಾಗಿದೆ ಎಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ನವರು ತಿಳಿಸಿದರು

ಮೇಲಿನಾಜೂಗಾನಹಳ್ಳಿ(ಘಾಟಿ) ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಇಂದು ಸಾರ್ವಜನಿಕ ಸಂಪರ್ಕ ಸಭೆಯನ್ನು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು
ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಅವುಗಳಿಗೆ ಸಾಧ್ಯವಾದಷ್ಟು ಪರಿಹಾರ ಕೊಡಲು ಪ್ರಯತ್ನಿಸಿದ್ದೇನೆ ಹಾಗೂ ಎಲ್ಲಾ ಅರ್ಜಿಗಳನ್ನು ಕುರಿತಂತೆ ಒಂದು ತಿಂಗಳ ಒಳಗಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ತಾಲ್ಲೂಕು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
ಸ್ಥಳೀಯವಾಗಿ ಉತ್ತಮ ಮೂಲಭೂತ ಸೌಕರ್ಯಗಳನ್ನು
ತೂಬಗೆರೆ ಪಂಚಾಯತಿಯಲ್ಲಿ ರಸ್ತೆ ಗಳ ನಿರ್ಮಾಣ,ನೀರಿನ ಸಮಸ್ಯೆಗಳು, ಆಸ್ಪತ್ರೆಯ ಸಮಸ್ಯಗಳ ಬಗ್ಗೆ ಮನವಿಗಳನ್ನು ನೀಡಿದ್ದು ಅವುಗಳನ್ನು ಅತಿ ಬೇಗನೆ ಈಡೇರಿಸಲು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್, ಮುಖ್ಯಕಾರ್ಯನಿರ್ವಹಣಾಧಿಕಾರಿ.ಡಾ.ಅನುರಾಧ, ಅಪರ ಮುಖ್ಯ ಜಿಲ್ಲಾಧಿಕಾರಿ ಅಂಬರೀಶ್, ತಹಶಿಲ್ದಾರ್ ವಿಭಾ ರಾಥೋಡ್, ಘಾಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಾಲ್ ನಾಯಕ್, ರಂಗಪ್ಪ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
