
ದೊಡ್ಡಬಳ್ಳಾಪುರ : ತಾಲ್ಲೂಕಿನ ಪ್ರತಿಭಾನ್ವಿತ ಕ್ರೀಡಾಪಟುಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಕ್ರೀಡೆಯನ್ನು ಪ್ರದರ್ಶನ ಮಾಡುತ್ತಿದ್ದು ಸ್ಥಳೀಯವಾಗಿ ಉತ್ತಮ ಅಭ್ಯಾಸ ನಡೆಸಲು ಸೌಕರ್ಯಗಳ ಕೊರತೆ ಇದೆ ಸಿಂತೇಟಿಕ್ ಟ್ರ್ಯಾಕ್ ಗಾಗಿ ನಮ್ಮ ಸ್ಥಳೀಯ ಮಟ್ಟದ ಕ್ರೀಡಾ ಪಟುಗಳು ತುಮಕೂರು ಅಥವಾ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಎಂದುರಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸ್ಪೋರ್ಟ್ಸ್ ಕಲ್ಬ್ ನ ತರಬೇತುದಾರ ಆನಂದ್ ಭೈರವ ತಿಳಿಸಿದರು
2024 ಫೆಬ್ರುವರಿ ತಿಂಗಳಿನಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಯುವ ಕ್ರೀಡಾಪಟುಗಳು ಆಯ್ಕೆಯಾಗಿದ್ದು ಈ ಕುರಿತು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಾತನಾಡಿದ ಅವರು ನಮ್ಮ ಗ್ರಾಮಾಂತರ ಪ್ರತಿಭೆಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿದ್ದು ಸಾಧನೆ ಮಾಡುವ ಯುವ ಮನಸ್ಸುಗಳಿಗೆ ಸೌಲಭ್ಯಗಳ ಕೊರತೆ ಎದುರಾಗಿದೆ ಸ್ಥಳೀಯವಾಗಿ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಿರಂತರ ಅಭ್ಯಾಸ ನಡೆಸುತ್ತಿದ್ದು ನಮ್ಮಲ್ಲಿ ಸೌಲಭ್ಯಗಳ ಕೊರತೆಯಿದೆ ಯುವ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಇಲಾಖೆಯ ಸಹಕಾರದ ಅವಶ್ಯಕತೆ ಇದೆ ಸ್ಥಳೀಯವಾಗಿ ಸಿಂತೇಟಿಕ್ ಟ್ರ್ಯಾಕ್ ಜೊತೆಗೆ ಪ್ರತ್ಯೇಕ ಕ್ರೀಡಾಂಗಣ ನಿರ್ಮಾಣದ ಅವಶ್ಯಕತೆ ಇದೆ ಎಂದು ತಿಳಿಸಿದರು
ತರಬೇತುದಾರ ಸುನಿಲ್ ಮಾತನಾಡಿ ಈ ಹಿಂದೆ ಹೊಸಕೋಟೆಯಲ್ಲಿ ನೆಡದ ನಿದ್ಜಮ್ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ವತಿಯಿಂದ 30 ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದು 20 ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಕ್ರೀಡಾಪಟುಗಳು ಉತ್ತಮ ರೀತಿಯಲ್ಲಿ ಅಭ್ಯಾಸ ನಡೆಸಿದ್ದು ಈ ಭಾರಿ ರಾಷ್ಟ್ರಮಟ್ಟದಲ್ಲಿ ನಮ್ಮ ಜಿಲ್ಲೆ ಹಾಗೂ ತಾಲ್ಲೂಕಿನ ಕ್ರೀಡಾಪಟುಗಳು ಸಾಧನೆ ಮಾಡಲಿದ್ದಾರೆ ಎಂದು ತಿಳಿಸಿದರು
ಯುವ ಕ್ರೀಡಾಪಟು ನಿತೇಶ್ ಗೌಡ ಮಾತನಾಡಿ ಕಳೆದ ಬಾರಿ ರಾಜ್ಯಮಟ್ಟದಲ್ಲಿ ರಾಷ್ಟ್ರಮಟ್ಟದಲ್ಲಿ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪದಕ ಪಡೆದಿದ್ದು ಈ ಭಾರಿ ಪಟ್ನಾದಲ್ಲಿ ನೆಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಬರವೆಸೆ ಇದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಪೋರ್ಟ್ಸ್ ಕ್ಲಬ್ ನ ತರಬೇತಿದಾರರು ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು