
ದೊಡ್ಡಬಳ್ಳಾಪುರ : ಮಹಾನ್ ಸನ್ಯಾಸಿ ವಿಶ್ವಗುರು ಸ್ವಾಮಿ ವಿವೇಕಾನಂದರ 160 ನೇ ಜಯಂತೋತ್ಸವದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವು ಭಾಗಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆಮಾಡಲಾಗಿತ್ತು
ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಂಕ್ ವಿತರಣೆ, ವಯೋವೃದ್ದರಿಗೆ ಹೊದಿಕೆ ( ಬೆಡ್ ಶೀಟ್) ವಿತರಣೆ, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ವಿತರಣೆ, ನಗರದ ನಿರ್ಗತಿಕರಿಗೆ ಗೀತಾ ಮಂದಿರದಲ್ಲಿ ಹಾಗೂ ಪಾಲನಜೋಗಹಳ್ಳಿ ಅನಾಥಾಶ್ರಮದಲ್ಲಿ ಮಕ್ಕಳಿಗೆ ಹಣ್ಣು ವಿತರಣೆ , ಕಡು ಬಡವರಿಗೆ ಹಾಗೂ ನಿರ್ಗತಿಕರಿಗೆ ಅನ್ನದಾಸೋಹ ಸೇರಿದಂತೆ ತಾಲ್ಲೂಕಿನ ಹಲವು ಭಾಗಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಸ್ವಾಮಿ ವಿವೇಕಾನಂದರ ಜಯಂತೋತ್ಸವವನ್ನು ಆಚರಣೆ ಮಾಡಲಾಗಿತ್ತು.
ಈ ಕುರಿತು ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ನರಸಿಂಹಮೂರ್ತಿ ಮಾತನಾಡಿ ವಿವೇಕಾನಂದರ ಜೀವನವೇ ಒಂದು ಅದ್ಭುತ , ಭಾರತ ಕಂಡ ಅತ್ಯುತ್ತಮ ವ್ಯಕ್ತಿತ್ವದ ವ್ಯಕ್ತಿಗಳಲ್ಲಿ ವಿವೇಕಾನಂದರು ಪ್ರಮುಖರು ಅವರ ಜೀವನ ಮಾರ್ಗ ನಮ್ಮೆಲ್ಲರಿಗೂ ಆದರ್ಶ ಸಮಾಜಕ್ಕೆ ನಮ್ಮಿಂದಾಗುವ ಅಳಿಲುಸೇವೆಯನ್ನು ಖಂಡಿತ ಮಾಡಲಾಗುವುದು ನಮ್ಮ ಟ್ರಸ್ಟ್ ನ ವತಿಯಿಂದ ಇಂದು ಸಾಂಕೇತಿಕವಾಗಿ ತಾಲ್ಲೂಕಿನ ಹಲವು ಭಾಗಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಮುಂದೆ ಟ್ರಸ್ಟ್ ನ ಮೂಲಕ ತಾಲ್ಲೂಕಿನಲ್ಲಿ ಸಾಕಷ್ಟು ಉತ್ತಮ ಕಾರ್ಯಗಳನ್ನು ಮಾಡಲಿದ್ದೇವೆ ಸ್ವಾಮಿ ವಿವೇಕಾನಂದರ ಆಶಯಗಳನ್ನು ಸಮಾಜಕ್ಕೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ , ಯುವ ಸಮುದಾಯ ಕುರಿತು ಸ್ವಾಮಿ ವಿವೇಕಾನಂದರು ಕಂಡ ಕನಸು ಇನ್ನೂ ಕನಸಾಗಿಯೇ ಉಳಿದಿದೆ ಯುವ ಭಾರತ ನಿರ್ಮಾಣಕ್ಕೆ ನಮ್ಮ ಟ್ರಸ್ಟ್ ಶ್ರಮಿಸುತ್ತದೆ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು