
ದೊಡ್ಡಬಳ್ಳಾಪುರ : ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವದ ಅಂಗವಾಗಿ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರು ವ್ಯವಸ್ಥೆ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನವ ಕರ್ನಾಟಕ ಯುವಶಕ್ತಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಹಳ್ಳಿ ರೈತ ಅಂಬರೀಶ್ ತಿಳಿಸಿದರು
ಈ ಕುರಿತು ಮಾತನಾಡಿದ ಅವರು ಘಾಟಿ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವವು ಜಗತ್ ಪ್ರಸಿದ್ಧವಾಗಿದ್ದು ಇಲ್ಲಿ ನಡೆಯುವ ದನಗಳ ಜಾತ್ರೆಯೂ ಕೂಡ ಅದ್ದೂರಿಯಾಗಿರುತ್ತದೆ ಈ ಬಾರಿಯ ದನಗಳ ಜಾತ್ರೆಯಗೆ ರಾಜ್ಯಾದ್ಯಂತ ರೈತರ ಉತ್ತಮ ಸ್ಪಂದನೆ ದೊರೆತಿದ್ದು ನಮ್ಮ ಸಂಘಟನೆಯ ವತಿಯಿಂದ ಉಚಿತ ಮೇವು ಹಾಗೂ ನೀರಿನ ವ್ಯವಸ್ಥೆ ಮಾಡಲಾಗಿತ್ತು ಈ ಮೇವು ವಿತರಣಾ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ಈ ಬಾರಿಯ ದನಗಳ ಜಾತ್ರೆಯಲ್ಲಿ ಹಲವು ಬಗೆಯ ಉತ್ತಮ ತಳಿಯ ರಾಸುಗಳು ಮಾರಾಟ ಹಾಗೂ ಪ್ರದರ್ಶನವಾಗಿವೆ. ನಾಳೆ (ಜನವರಿ 16)ನಡೆಯುವ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವರ ರಥೋತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದ್ದು ಬರುವ ಭಕ್ತಾದಿಗಳಿಗೆ ನಮ್ಮ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಹಾಗೂ ಹಿರಿಯ ನಾಗರಿಕರಿಗೆ ನಮ್ಮ ಸಂಘಟನೆಯ ವತಿಯಿಂದ ವಿಶೇಷ ದರ್ಶನ ಕಲ್ಪಿಸಲು ಸಿದ್ಧತೆ ಮಾಡಲಾಗಿದೆ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು
ಸಂಘಟನೆ ವತಿಯಿಂದ ಈ ವಿಶೇಷ ಕಾರ್ಯ ನಡೆಸಲು ಹತ್ತು ಜನಗಳ ವಿಶೇಷ ಸ್ವಯಂಸೇವಕ ತಂಡವನ್ನು ರಚನೆ ಮಾಡಲಾಗಿದ್ದು ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಮ್ಮ ಸ್ವಯಂಸೇವಕರ ತಂಡದ ವತಿಯಿಂದ ಮಾಡಲಾಗುತ್ತದೆ ಹಾಗೂ ದೇವಾಲಯಕ್ಕೆ ಬರುವ ಹಿರಿಯ ನಾಗರಿಕ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ನವ ಕರ್ನಾಟಕ ಯುವಶಕ್ತಿ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು