
ದೊಡ್ಡಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕುರುಬ ಸಮದಾಯದ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಪಕ್ಷದ ಟಿಕೆಟ್ ನೀಡಬೇಕೆಂದು ಎಂಟಿಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ನಗರದ ಜೆ ಸಿ ಎನ್ ಕನ್ವೆನ್ಷನ್ ಹಾಲ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ಆಡಳಿತ ಸಭ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಘೋಷ ವಾಕ್ಯದಂತೆ ಹಿಂದುಳಿದ ವರ್ಗದ ಕುರುಬ ಸಮಾಜಕ್ಕೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ನೀಡಬೇಕೆಂಬುದು ನಮ್ಮ ಸಮುದಾಯ ಒತ್ತಾಯಿಸುತ್ತದೆ .
ಪ್ರಸ್ತುತ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಮಾರು 2.ಲಕ್ಷಕ್ಕೂ ಅಧಿಕ ಮತದಾರರನ್ನು ಹೊಂದಿದ್ದು, ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾಗಿ ನಾಯಕರಾಗಿ ಹೆಚ್ಚು ಜನಮನ್ನಣೆಗಳಿಸಿರುವ ಎಂಟಿಬಿ ನಾಗರಾಜ್ ಅವರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಬಿಜೆಪಿ ಗೆಲುವು ಬಹುತೇಕ ಖಚಿತವಾಗಲಿದೆ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯವಾಗಿ ಹೆಚ್ಚಿನ ಶ್ರಮದಾನ ಮಾಡುವ ಮೂಲಕ ನಮ್ಮ ನೆಚ್ಚಿನ ನಾಯಕ ಎಂಟಿಬಿ ನಾಗರಾಜ್ ಅವರನ್ನು ವಿಜಯಶಾಲಿಯನ್ನಾಗಿ ಮಾಡಲಾಗುವುದು ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಜೀ ಯವರ ಕೈಬಲಪಡಿಸಲು ಹೆಚ್ಚಿನ ಅವಕಾಶ ದೊರೆಯುತ್ತದೆ ಎಂದರು
ಬಿಜೆಪಿ ಪಕ್ಷದ ಹಿಂದಿನ ಸರ್ಕಾರದಲ್ಲಿ ಪೌರಾಡಳಿತ ಮಂತ್ರಿಯಾಗಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿ ಸಾರ್ವಜನಿಕರವಿಶ್ವಾಸಕ್ಕೆ ಪಾತ್ರರಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿದರೆ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು
ಈ ವೇಳೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖಂಡರು, ಎಂಟಿಬಿ ನಾಗರಾಜ್ ಅವರು ಸಿದ್ದರಾಮಯ್ಯರ ಆಪ್ತರು ಆದರೂ ಬಿಜೆಪಿ ಪಕ್ಷಕ್ಕೆ ನಿಷ್ಟವಂತರಾಗಿದ್ದರೆ, ಈಗಾಗಲೇ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಾರಣ ಕಾಂಗ್ರೆಸ್ ನಿಂದ ಸ್ಪರ್ಧೆಯ ಮಾತಿಲ್ಲವೆಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಕೇಶವ ಮೂರ್ತಿ ಹೊಸಕೋಟೆ, ತಾಲೂಕು ಬಿಜೆಪಿ ಒಬಿಸಿ ಅಧ್ಯಕ್ಷ ಆಲಳ್ಳಿ ಚಂದ್ರಶೇಖರ್, ಕನಕ ಕೋ.. ಅಪರೇಟಿವ್ ಸೊಸೈಟಿ ಅಧ್ಯಕ್ಷ ಲೋಕೇಶ್, ಗ್ರಾಪಂ ಸದಸ್ಯ ನಾಗರಾಜ್, ಮುಖಂಡರಾದ ಮಂಜುನಾಥ್, ಎಲ್ಲಪ್ಪ, ಚೌಡರಾಜ್, ಕೆಂಪರಾಜು, ಲಕ್ಷ್ಮೀಷ, ಬೀರೇಶ್, ಮುನಿ ಬೀರಣ್ಣ ಮತ್ತಿತರರಿದ್ದರು.