
ಸಾರ್ವಜನಿಕರ ಆರೋಗ್ಯ ಮತ್ತು ಯುವ ಜನತೆಯ ಭವಿಷ್ಯದ ರಕ್ಷಣೆಗಾಗಿ ರಾಜ್ಯದಾದ್ಯಂತ ಹುಕ್ಕಾ ನಿಷೇಧ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮಂತ್ರಿಗಳಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹುಕ್ಕಾ ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳನ್ನು ಗಮನದಲ್ಲಿರಿಸಿ ರಾಜ್ಯದಾದ್ಯಂತ ಹುಕ್ಕಾ ಸೇವನೆಯನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಲಾಗಿದೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆಗೆ (COTPA) ತಿದ್ದುಪಡಿ ಮಾಡುವ ಮೂಲಕ ಹುಕ್ಕಾ ಸೇವನೆಯ ನಿಷೇಧವನ್ನು ಕರ್ನಾಟಕದಲ್ಲಿ ಜಾರಿಗೆ ತರುತ್ತಿದ್ದೇವೆ.
ನಮ್ಮ ಮುಂದಿನ ಪೀಳಿಗೆಗೆ ಸುರಕ್ಷಿತ ಮತ್ತು ಆರೋಗ್ಯಕರ ವಾತಾವರಣವನ್ನು ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದ್ದಾರೆ.