
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಸನ್ಮಾನ್ಯ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿ/ಉದ್ದಿಮೆ/ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿರುವುದರಿಂದ ವಿಕಲಚೇತನ ಅಭ್ಯರ್ಥಿಗಳು/ಉದ್ಯೋಗಾಕಾಂಕ್ಷಿಗಳು https://udyoga.skillconnet.kaushalkar.com/ ಲಿಂಕ್‌ನಲ್ಲಿ ನೋಂದಾಯಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.