ಅಭಿವೃದ್ಧಿಯಲ್ಲಿ ದೊಡ್ಡಬಳ್ಳಾಪುರ 25 ವರ್ಷಗಳಷ್ಟು ಹಿಂದಕ್ಕೆ -ಹಾಲಿ ಶಾಸಕರ ವಿರುದ್ಧ ಮಾಜಿ ಶಾಸಕರ ವಾಗ್ದಾಳಿ

Spread the love

ಕಳೆದ ಹತ್ತು ತಿಂಗಳ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ನೂತನವಾಗಿ ಯಾವುದೇ ಶಂಕುಸ್ಥಾಪನೆಯಾಗಿಲ್ಲ. ಜನರಿಂದ ಮತ ಪಡೆದು ಸ್ಥಳೀಯ ಶಾಸಕರು ಮೋಜು ಮಸ್ತಿ ಮಾಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕುರಿತು ಸುಳ್ಳು ಮಾಹಿತಿಯನ್ನು ಮತದಾರರಲ್ಲಿ ಹರಡುತ್ತಿದ್ದಾರೆ ಎಂದು ಆರೋಪಿಸಿದರು.

 

 

ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಜಾತ್ರ ಮಹೋತ್ಸವದ ಅಂಗವಾಗಿ ಎಂ ಎಸ್ ರಾಮಯ್ಯ ಫೌಂಡೇಶನ್ ಸಹಕಾರದೊಂದಿಗೆ ದೊಡ್ಡಬಳ್ಳಾಪುರ ಅಮೇಜಿಂಗ್ ಕಬ್ಬಡ್ಡಿ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಕಬ್ಬಡಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಈ ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ಕಾರ್ಮಿಕರಿಗಾಗಿ ಇಎಸ್ಐ ಆಸ್ಪತ್ರೆ ಸಿದ್ಧಗೊಂಡಿದ್ದು ಇನ್ನು ಉದ್ಘಾಟನೆ ಮಾಡಿಲ್ಲವೇಕೆ ಎಂದು ಪ್ರಶ್ನೆ ಮಾಡಿದರು. ಈ ಹಿಂದೆ ತಾಲ್ಲೂಕಿನಲ್ಲಿ ಎರಡು ಬಾರಿ ಶಾಸಕರಾಗಿ ತಾವು ಆಯ್ಕೆಯಾಗಿದ್ದು ಎರಡು ಅವಧಿಯಲ್ಲಿ ತಾಲೂಕಿನಾದ್ಯಂತ ಶಾಂತಿ ಕಾಪಾಡುವಲ್ಲಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಿದ್ದೇವೆ ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಮಾನ್ಯ ಮುಖ್ಯಮಂತ್ರಿಗಳನ್ನು ಏಳು ಬಾರಿ ಶಂಕುಸ್ಥಾಪನಾ ಕಾರ್ಯಕ್ಕೆ ಬರಮಾಡಿಕೊಂಡಿದೇವೆ.

 

ತಾಲ್ಲೂಕಿನಲ್ಲಿ ಸರಿಸುಮಾರು ಎರಡು ಸಾವಿರ ಕೋಟಿ ಅನುದಾನಗಳ ಕಾಮಗಾರಿಗಳನ್ನು ಮಾಡಿದ್ದೇವೆ ಎಂದರು. ತಾಲ್ಲೂಕಿನ ಮಧುರೆ ಗ್ರಾಮದಲ್ಲಿ ಇಂದು ನಡೆದ ಗ್ರಾಮಚಲೋ ಅಭಿಯಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿರುವ ಗ್ಯಾರೆಂಟಿ ಯೋಜನೆಗಳನ್ನು ಕುರಿತು ಮಾತನಾಡಿದ್ದಾರೆ ರಾಜ್ಯದ ಜನತೆಗೆ ಬರಗಾಲದ ಪರಿಸ್ಥಿತಿಯಲ್ಲಿ ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಇದನ್ನು ಅರಿಯದೆ ಲೋಕಸಭಾ ಚುನಾವಣೆಯಲ್ಲಿ ಮತ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ಮತ್ತೊಮ್ಮೆ ಪಾಠ ಕಲಿಸಿದ್ದಾರೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *