
ಕರ್ನಾಟಕ ಏಪ್ರಿಲ್ 10 ( ವಿಜಯಮಿತ್ರ) : ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೊಂಡಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದೆ .
ಈ ಸಂದರ್ಭದಲ್ಲಿ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಮಾತನಾಡಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು 6 ಲಕ್ಷ 98 ಸಾವಿರ 378 ವಿದ್ಯಾರ್ಥಿ ಅರ್ಹರಾಗಿದ್ದರು. ಅದರಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 6,81,079. ಒಟ್ಟು 17 ಸಾವಿರ ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲಿ ಗೈರು ಆಗಿದ್ದಾರೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5 ಲಕ್ಷ 52 ಸಾವಿರದ 690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಾಗಾಗಿ ಉತ್ತೀರ್ಣದ ಪ್ರಮಾಣ ಶೇ.81. 15ರಷ್ಟಿದೆ. 2023ರಲ್ಲಿ 74.67ರಷ್ಟಿತ್ತು. ಈ ಬಾರಿ ಏರಿಕೆ ಕಂಡಿದೆ ಎಂದರು
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಗದಗ ಕೊನೇ ಸ್ಥಾನ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮಿ 598 ಅಂಕ ಟಾಪರ್ ಆಗಿ ಕಾಣಿಸಿಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ರಾಜ್ಯಕ್ಕೆ ಮೊದಲ ರ್ಯಂಕ್ ಬಂದಿದ್ದಾರೆ. ಮೇಧಾ NMKRV ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು 596 ಅಂಕ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲಕೃಷ್ಣ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.