
ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಬಿಬಿಎಂಪಿ ಈಗ ಜನರ ಮೇಲೆ ಮತ್ತೊಂದು ತೆರಿಗೆ ವಿಧಿಸಲು ಸಜ್ಜಾಗುತ್ತಿದೆ. ಹೌದು ಬಿಬಿಎಂಪಿ ವ್ಯಾಪ್ತಿಯ ಪ್ರತಿ ಮನೆಯಿಂದ 100 ರೂ. ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಯೋಜನೆ ರೂಪಿಸಲಾಗುತ್ತಿದೆ.
Ad
ಘನತ್ಯಾಜ್ಯ ನಿರ್ವಹಣೆಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯನ್ನು ಸ್ಥಾಪನೆ ಮಾಡಲಾಗಿದ್ದು ಇನ್ನುಮುಂದೆ ಈ ಕಂಪನಿ ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಯ ಜವಾಬ್ದಾರಿ ನೋಡಿಕೊಳ್ಳಲಿದೆ. ಈಗ ಕಂಪನಿಯಿಂದ ನೇರವಾಗಿ ಘನತ್ಯಾಜ್ಯ ಸೇವಾ ಶುಲ್ಕವಾಗಿ ಪ್ರತಿ ತಿಂಗಳು ಪ್ರತಿ ಮನೆಗೆ 100 ರೂ. ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Ad
ಈ ಹಿಂದೆ ಪ್ರತಿ ತಿಂಗಳು 30 ರೂ. ಶುಲ್ಕ ಸಂಗ್ರಹ ಮಾಡುವ ಚಿಂತನೆ ನಡೆದಿತ್ತು. ಆದರೆ ಈ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ವಿಚಾರವನ್ನು ಕೈಬಿಡಲಾಗಿತ್ತು. ಆದರೆ ಈಗ ಮತ್ತೆ ಮನೆ ಮನೆಗೂ ಘನತ್ಯಾಜ್ಯ ಶುಲ್ಕ ವಿಧಿಸುವುದಕ್ಕೆ ಸರ್ಕಾರ ಮುಂದಾಗಿದೆ.
ಆಸ್ತಿ ತೆರಿಗೆಯೊಂದಿಗೆ ಘನತ್ಯಾಜ್ಯ ಸೇವಾ ಶುಲ್ಕ ವಿಧಿಸುವ ಮೂಲಕ ಹಣ ಸಂಗ್ರಹಕ್ಕೆ ಯೋಚನೆ ರೂಪಿಸಲಾಗಿದೆ.ಸದ್ಯ ವಸತಿ ಕಟ್ಟಡಗಳಿಗೆ ಮಾಸಿಕ 100 ರೂ. ವಾಣಿಜ್ಯ ಕಟ್ಟಡಗಳಿಗೆ 200 ರೂ ದರ ನಿಗದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.