
ಲೋಕ್ ಅದಾಲತ್‌ನ ಮೂಲ ಉದ್ದೇಶವೇನೆಂದರೇ ಯಾವುದೇ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡು ಸೌರ್ಹಾಧಯುತವಾದ ಜೀವನವನ್ನು ನಡೆಸಲು ಸಾಧ್ಯವಾಗಬೇಕು, ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆಯಾದ ಕೆ.ಬಿ ಗೀತಾ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು ಲೋಕ್ ಅದಾಲತ್‌ನ ಬಗ್ಗೆ ಮಾಹಿತಿ ನೀಡುತಾ ಜನತಾ ನ್ಯಾಯಾಲಯದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಇರುತ್ತಾರೆ. ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯವನ್ನು ಪ್ರವೇಶಿಸದೇ ಇರತಕ್ಕಂತಹ ಪ್ರಕರಣಗಳನ್ನು ಸಹ ನಾವು ಜನತಾ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬಹುದು ಆದ್ದರಿಂದ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ತೀರ್ಮಾನದಂತೆ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದವರ ನಿರ್ದೇಶನದಂತೆ ನಾವು ಪ್ರತಿ ಜಿಲ್ಲೆಯಲ್ಲಿಯೂ ಸಹ ಈ ವರ್ಷದ ಜುಲೈ 13 ನೇ ತಾರೀಖು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಇದು ಈ ವರ್ಷದ ಎರಡನೇ ಲೋಕ್ಸ್ ಅದಾಲತ್ ಆಗಿದೆ ಎಂದರು.
16/03/2024 ರಂದು ಈ ವರ್ಷದ ಕೊನೆಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು ಅದರಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿ ಇದ್ದ 13,884 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಾದ 2.13,903 ಪ್ರಕರಣಗಳನ್ನು ಸೇರಿಸಿ ಒಟ್ಟು 227787 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿಲೇವಾರಿ ಮಾಡಲಾಗಿದೆ ಹಾಗೂ ವಿವಿಧ ನ್ಯಾಯಾಲಯದಲ್ಲಿ ವಿಚೇಧನಕ್ಕಾಗಿ ಅರ್ಜಿ ಸಲ್ಲಿಸಿದ 1 ಜೋಡಿ ಮತ್ತೆ ಒಂದುಗೂಡಿಸಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಅದಾಲತ್ ಜಿಲ್ಲೆಯ ಹಾಗೂ ಪ್ರತಿಯೊಂದು ತಾಲೂಕಿನ ನ್ಯಾಯಾಲಯಗಳಲ್ಲಿಯೂ ಸಹ ಜುಲೈ 13 ರಂದು ರಂದು ನಡೆಯಲಿದೆ.
ಈ ಲೋಕ್ ಅದಾಲತ್‌ನ ಉಪಯೋಗಗಳೇನೆಂದರೆ ಪಕ್ಷಗಾರರು ತಮ್ಮ ಪ್ರಕರಣಗಳನ್ನು ನೇರವಾಗಿ ಶೀಘ್ರವಾಗಿ ಜನತಾ ನ್ಯಾಯಾಲಯದಲ್ಲಿ ಒಂದೇ ಸಿಟ್ಟಿಂಗ್‌ನಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು ಅವರು ನೇರವಾಗಿ ಅಥವಾ ವಕೀಲರ ಮೂಲಕ ಭಾಗವಹಿಸಬಹುದು. ಎರಡು ಪಕ್ಷಗಾರರಿಗೆ ಒಪ್ಪಿಗೆಯಾದ ತೀರ್ಮಾನವನ್ನು ಮಾತ್ರ ಲೋಕ್ ಅದಾಲತ್‌ನಲ್ಲಿ ತೀರ್ಮಾನ ಮಾಡಲಾಗುವುದು, ಆದ್ದರಿಂದ ಇಬ್ಬರು ಪಕ್ಷಗಾರರ ಒಪ್ಪಿಗೆಯಿಂದ ತೀರ್ಮಾನವಾಗುವುದರಿಂದ ಅವರ ಬಾಂದವ್ಯವು ಚೆನ್ನಾಗಿ ಆಗಿ. ವಿವಾದವು ಸುಖಾಂತ್ಯವಾಗುತ್ತದೆ ಮತ್ತು ಅದರ ಮೇಲೆ ಯಾವುದೇ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶವಿಲ್ಲದಿರುವುದರಿಂದ ಅದು ಅಂತಿಮ ತೀರ್ಮಾನವಾಗುತ್ತದೆ, ನ್ಯಾಯಾಲಯದಲ್ಲಿ ದಾಖಲು ಮಾಡಿದಾಗ ಸಲ್ಲಿಸಿದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲಾಗುವುದು ಆದ್ದರಿಂದ ಇದು ಅತ್ಯಂತ ಕಡಿಮೆ ಖರ್ಚಿನಲ್ಲಿ ತೀರ್ಮಾನವಾಗುತ್ತದೆ ಕೇವಲ ಮೋಸ ಅಥವಾ ಮಿಸ್ ರೆಪ್ರಸೆಂಟೇಷನ್ ನಂತಹ ಸಂದರ್ಭದಲ್ಲಿ ಮಾತ್ರ ಸದರಿ ಲೋಕ್ ಅದಾಲತ್‌ನ ತೀರ್ಮಾನದ ವಿರುದ್ಧ ಮೇಲ್ಮನವಿ ಸಲ್ಲಿಸಬಹುದಾಗಿದೆ. ಇದರಿಂದ ಕೇವಲ ಅರ್ಧ ಅಡಿ, ಒಂದು ಅಡಿಗಾಗಿ ಅಕ್ಕಪಕ್ಕದ ಮನೆಯವರು ಏನಾದರೂ ದಾವೆಗಳನ್ನು ಸಲ್ಲಿಸಿದ್ದೆ ಆದರೆ ಅಂತಹ ದಾವೆಗಳು ತೀರ್ಮಾನವಾದಾಗ ನೆರೆಹೊರೆಯವರ ಸಂಬಂಧ ಚೆನ್ನಾಗಿ ಆಗುತ್ತದೆ ಸೌರ್ಹಾದಯುತವಾಗುತ್ತದೆ ಇದರಿಂದ ನಾವು ಉತ್ತಮ ದೇಶದ ನಿರ್ಮಾಣ ಮಾಡಲು ಸಹಾಯವಾಗುತ್ತದೆ.
*ರಾಜಿ ಸಂಧಾನದ ಮೂಲಕ ಲೋಕ್ ಅದಾಲತ್ ನಲ್ಲಿ ಯಾವ ಯಾವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂಬುದನ್ನು ನೋಡೋಣ*
ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ ಚೆಕ್ ಅಮಾನ್ಯದ ಪ್ರಕರಣಗಳು ಅಂದರೆ ಸೆಕ್ಷನ್ 138 ಆಫ್ ದ ಎನ್.ಐ ಆಕ್ಷ Negotable Instrument Act ಕಾಯ್ದೆ ಯ 138 ರ ಅಡಿಯಲ್ಲಿ ಸಲ್ಲಿಸಿರುವ ಪ್ರಕರಣಗಳು ಸಲ್ಲಿಸಬಹುದಾದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗ ಪುನಃ ಸ್ಥಾಪಿಸಲ್ಪಡಬೇಕಾದ ಪ್ರಕರಣಗಳು, ಇತರೆ ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಪಟ್ಟಂತಹ ಪ್ರಕರಣಗಳು, ವಿದ್ಯುತ್ ನೀರಿನ ಶುಲ್ಕದ ಅದರಲ್ಲಿ Non Compoundable ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಪ್ರಕರಣಗಳು ಇತರೆ ಎಲ್ಲಾ ರಾಜಿ ಆಗ ತಕ್ಕಂತಹ ಅಪರಾಧಿಕ ಪ್ರಕರಣಗಳು ವೈವಾಹಿಕ ಪ್ರಕರಣಗಳು ಇತರೆ ಸಿವಿಲ್ ಪ್ರಕರಣಗಳನ್ನು ಸಹ ಇತ್ಯರ್ಥ ಪಡಿಸಿಕೊಳ್ಳಬಹುದು ಅದೇ ಪ್ರಕಾರ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿ ಇರತಕ್ಕಂತಹ ಬಾಕಿ ಇರುವ ಪ್ರಕರಣಗಳಲ್ಲಿ ರಾಜಿ ಆಗಬಹುದಾದಂತಹ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗ ಪುನರ್ ಸ್ಥಾಪಿಸಲ್ಪಡಬೇಕಾದ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನದ ಪ್ರಕರಣಗಳು, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಪ್ರಕರಣಗಳು ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಅಥವಾ ಕುಟುಂಬ ನ್ಯಾಯಾಲಯದಲ್ಲಿ ವಿಚ್ಛೇದನವನ್ನು ಹೊರತುಪಡಿಸಿದ ಉಳಿದ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರದ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾಧಗಳು, ವಿದ್ಯುತ್ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗೆ ಸಂಬಂಧಿಸಿದ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ರಾಜೀ ಯಾಗಬಹುದಾದಂತಹ ಎಲ್ಲಾ ಸಿವಿಲ್ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಈ ರೀತಿಯ ಎಲ್ಲಾ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳಬಹುದು ಅದುದ್ದರಿಂದ ಈ ಬಾರಿಯ ಲೋಕ್ ಅದಾಲತ್ ನಲ್ಲಿ ದಿನಾಂಕ 13/07/2024 ರಂದು ನಡೆಯುತ್ತಿರುವ ಈ ವರ್ಷದ ಎರಡನೇ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ತಮ್ಮ ಪ್ರಕರಣಗಳನ್ನು ಸಾರ್ವಜನಿಕರು ಇತ್ಯರ್ಥ ಪಡಿಸಿಕೊಳ್ಳಬಹುದು.
ಈ ಲೋಕ್ ಅದಾಲತ್‌ನ ಉದ್ದೇಶವನ್ನು ಸಾರ್ವಜನಿಕರು ಸಫಲಗೊಳಿಸಲಿ ಮತ್ತು ಇದು ಎಲ್ಲಾ ಜನರನ್ನು ತಲುಪಲಿ ಎಂಬ ಸದುದ್ದೇಶದಿಂದ ಈ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಲೋಕ್ ಅದಾಲತ್ ಸಂಬಂಧಿತ ಯಾವುದಾದರೂ ಪ್ರಶ್ನೆಗಳಿದ್ದರೆ ಅಧಿಕೃತ ವೆಬ್ ಸೈಟ್ ಇ disablrrural@gmail.com ಕಚೇರಿ ದೂರವಾಣಿ ಸಂಖ್ಯೆ 08022222919 ಸಹ ಸಂಪರ್ಕಿಸಬಹುದು, ಹಾಗೂ ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಇರತಕ್ಕಂತಹ ಸದಸ್ಯ ಕಾರ್ಯದರ್ಶಿಗಳ ಕಚೇರಿಗೆ ಖುದ್ದಾಗಿ ಭೇಟಿ ಮಾಡಿ ಕೂಡ ತಮ್ಮ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 13 ರಂದು ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ರಾಜೀಯಾಗಬಲ್ಲ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.