ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ತಿಳಿಸಿದರು.

ಶ್ರೀ ದೇವರಾಜ ಅರಸ್ ಅಂತರಾಷ್ಟ್ರೀಯ ವಸತಿ ಪ್ರೌಢಶಾಲಾ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಬದಲಾಗಿದೆ. ಆಧುನಿಕ ಕಾಲದಲ್ಲಿ ಯುವಕರ ಶಿಕ್ಷಣ ಮಟ್ಟವನ್ನು ನಿರ್ಧರಿಸುವುದು ಕೌಶಲ್ಯ, ಸಾಮಾನ್ಯ ಜ್ಞಾನಗಳ ಮೇಲೆ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಸ್ಪರ್ಧಿಸಲು ಕೌಶಲ್ಯಗಳು ಬಹಳ ಮುಖ್ಯ ಎಂದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಜಿಯಾವುಲ್ಲಾಖಾನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು ಯಾವುದಕ್ಕೂ ಹಿಂಜರಿಯದೆ ಸಾಧನೆಗೆ ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಮತ್ತು ಸಾಧನೆಗೆ ಎಲ್ಲಾ ತರಹದ ಸಹಕಾರವಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ, ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಂತೇಶಪ್ಪ,, ದೈಹಿಕ ಶಿಕ್ಷಣ ನಿರ್ದೇಶಕರಾದ ವಿ ಶ್ರೀನಿವಾಸ್, ಶಿಕ್ಷಕರಾದ ವಿಜಯಕುಮಾರ್, ಮಹಮ್ಮದ್ ಕೈಸರ್ ಪಾಷಾ, ದೇವರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
