*ಉದ್ಯಮಿ ಸಮಾಜಸೇವಕ ಸಂದೀಪ್ ರವರಿಗೆ ಹುಟ್ಟುಹಬ್ಬದ ಸಂಭ್ರಮ : ವಿಜೃಂಭಣೆಯ ಕಾರ್ಯಕ್ರಮ ಆಯೋಜನೆ ಮಾಡಲಿರುವ ಅಭಿಮಾನಿ ವರ್ಗ *

Spread the love

ದೊಡ್ಡಬಳ್ಳಾಪುರ:ಯುವ ಮುಖಂಡ ಉದ್ಯಮಿ ಹಾಗೂ ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ
ಜನ್ಮ ದಿನಾಚರಣೆ ಜುಲೈ 31 ಬುಧವಾರದಂದು ಅವರ ಸ್ವಗ್ರಾಮದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಅಭಿಮಾನಿ ಬಳಗ ತಿಳಿಸಿದೆ.

ನಿರಂತರ ಸಮಾಜಸೇವೆ ಹಾಗೂ ಕನ್ನಡಪರ ಧ್ವನಿಯಾಗಿ ಶ್ರಮಿಸುವ ಸಂದೀಪ್ ರವರ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಯೋಜನೆ ರೂಪಿಸಲಾಗಿದ್ದು ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು,ಹಿತೈಷಿಗಳು ಸೇರಿದಂತೆ ಅಭಿಮಾನಿ ವರ್ಗ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭಿಸಿ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಬ್ಯಾಗ್ ವಿತರಣೆ ಕಾರ್ಯನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು.

ಕಾರ್ಯಕ್ರಮಕ್ಕೆ ದೇವನಹಳ್ಳಿ ಮಾಜಿಶಾಸಕ ನಿಸರ್ಗ ನಾರಾಯಣಸ್ವಾಮಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ಕರವೇ ಕುಟುಂಬ ಬಳಗಸೇರಿದಂತೆ ತಾಲ್ಲೂಕಿನ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.