
ದೊಡ್ಡಬಳ್ಳಾಪುರ ಆಗಸ್ಟ್ 15b(ವಿಜಯಮಿತ್ರ) : 78 ನೇ ಭಾರತ ಸ್ವಾತಂತ್ರೋತ್ಸವದ ಅಂಗವಾಗಿ ಕೃಷಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಳ್ಳಿರೈತ ಅಂಬರೀಶ್ ರವರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದನಾಪೂರ್ವಕವಾಗಿ ಗೌರವಿಸಲಾಯಿತು.
ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದ 78 ನೇ ಭಾರತ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿರುವ ಗಣ್ಯರಿಗೆ ಪ್ರಶಸ್ತಿ ಪಡೆದ ಪ್ರಧಾನ ಮಾಡಲಾಯಿತು ಅಂತೆಯೇ ಕೃಷಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಳ್ಳಿರೈತ ಅಂಬರೀಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಕುರಿತು ಹಳ್ಳಿ ರೈತ ಅಂಬರೀಶ್ ಮಾತನಾಡಿ ಕೃಷಿ ಕ್ಷೇತ್ರದಲ್ಲಿ ನಾನು ಸಲ್ಲಿಸಿರುವ ನಿಸ್ವಾರ್ಥ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಈ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇದು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ . ರೈತರ ಪರ ಧ್ವನಿಯಾಗಿ ಸದಾ ಶ್ರಮಿಸುತ್ತೇನೆ. ಹಳ್ಳಿ ರೈತನ ಉಳಿವು ನನ್ನ ಹೋರಾಟದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಪ್ರಶಸ್ತಿ, ಗೌರವ ನನ್ನದಲ್ಲ ಪ್ರತಿನಿತ್ಯ ಬಿಸಿಲು ಮಳೆಯನ್ನು ಲೆಕ್ಕಿಸದೆ ಶ್ರಮಿಸುವ ಪ್ರತಿ ಹಳ್ಳಿ ರೈತನಿಗೆ ಸಲ್ಲುತ್ತದೆ . ಅವರ ಪ್ರತಿನಿಧಿಯಾಗಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ ಅಷ್ಟೇ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಉಪ ವಿಭಾಗಾಧಿಕಾರಿ ದುರ್ಗಾ ಶ್ರೀ , ತಾಲ್ಲೂಕು ದಂಡಧಿಕಾರಿಗಳಾದ ವಿದ್ಯ ವಿಭಾ ರಾಥೋಡ್ ಸೇರಿದಂತೆ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.