
ದೊಡ್ಡಬಳ್ಳಾಪುರ (ವಿಜಯಮಿತ್ರ) : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ಗ್ರಾಮಾಂತರ ಘಟಕ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಅಭಿನಂದನೆ ಸಲ್ಲಿಸಿದ್ದಾರೆ
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿ ಆದೇಶ ಹೊರಡಿಸಿದೆ ಈ ತೀರ್ಮಾನ ಕನ್ನಡಿಗರ ಹೆಮ್ಮೆಯನ್ನು ದುಪ್ಪಟ್ಟು ಮಾಡಿದೆ ಇದನ್ನು ಕರವೇ (ನಾರಾಯಣ ಗೌಡರ ಬಣ ) ಸ್ವಾಗತಿಸುತ್ತದೆ ಎಂದರು.
ಕನ್ನಡಿಗರ ಸ್ವಾಭಿಮಾನವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಈ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಕರವೇ ಅಭಿನಂದನೆ ಸಲ್ಲಿಸುತ್ತದೆ ಎಂದು ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.