*ಸಿ.ಸಿ.ಟಿ.ವಿ ಅಳವಡಿಕೆ ಮತ್ತು ರಿಪೇರಿ ಉಚಿತ ತರಬೇತಿಗೆ ಆಸಕ್ತರು ಅರ್ಜಿ ಸಲ್ಲಿಸಿ*

Spread the love

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 20, 2024(ವಿಜಯ ಮಿತ್ರ ): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಸಿ.ಸಿ.ಟಿ.ವಿ ಅಳವಡಿಕೆ ಮತ್ತು ರಿಪೇರಿ ಉಚಿತ ತರಬೇತಿಯು 18 ಅಕ್ಟೋಬರ್ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್‌ ಕಾರ್ಡ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ. 

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ 8884554510, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆ ನಿರ್ದೇಶಕರಾದ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.