
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 20, 2024(ವಿಜಯ ಮಿತ್ರ ):- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಬ್ರಹ್ಮಶ್ರೀ ನಾರಾಯಣಗುರು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.