
ದೊಡ್ಡಬಳ್ಳಾಪುರ ಆಗಸ್ಟ್ 20 (ವಿಜಯಮಿತ್ರ) : ಮಂಗಳೂರಿನಲ್ಲಿ ಮಾನ್ಯ ಘನತೆವೆತ್ತ ರಾಜ್ಯಪಾಲರನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ ರವರು ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸುವ ಮೂಲಕ ಕರ್ನಾಟಕದ ಗೌರವವನ್ನು ಹರಾಜು ಹಾಕಿದ್ದಾರೆ. ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸುವ ರಾಜ್ಯಪಾಲರನ್ನು ಕುರಿತು ಈ ರೀತಿಯ ಅವಹೇಳನಕಾರಿ ಹೇಳಿಕೆ ಸಲ್ಲದು ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಆಕ್ರೋಶ ವ್ಯಕ್ತಪಡಿಸಿದರು.
ನಗರದ ತಾಲೂಕು ಕಚೇರಿ ವೃತ್ತದಲ್ಲಿ ಭ್ರಷ್ಟರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಹಗರಣವನ್ನು ಮುಚ್ಚಿಹಾಕುವ ಕುತಂತ್ರಗಳು ನಡೆಯುತ್ತಿವೆ . ರಾಜ್ಯಪಾಲರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಅವರನ್ನು ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ವಿಧಾನಸಭಾ ಸದಸ್ಯ ಐವಾನ್ ಡಿಸೋಜರನ್ನು ಕೂಡಲೇ ಬಂಧಿಸಬೇಕು.ಬಿಜೆಪಿ ಪಕ್ಷ ರಾಜ್ಯದ ಜನರ ಪರವಾಗಿ ಧ್ವನಿಯೆತ್ತಿದ್ದು, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.
ರಾಜ್ಯಪಾಲರನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ ರವರು ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದು ಈ ಕುರಿತಂತೆ ದೊಡ್ಡಬಳ್ಳಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ಹನುಮಂತರಾಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಬಂತಿ, ನಗರ ಬಿಜೆಪಿ ಅಧ್ಯಕ್ಷ ಮುದ್ದಪ್ಪ, ಪ್ರಶಿಕ್ಷಣ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯ ಆರ್.ಗೋಪಿ, ನಗರಾಡಳಿತ ಪ್ರಕೋಷ್ಟ ಜಿಲ್ಲಾ ಸಂಚಾಲಕ ಕೆ.ಹೆಚ್.ವೆಂಕಟರಾಜು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಜೆ.ಮಂಜುನಾಥ್,ನಗರ ಪ್ರಧಾನ ಕಾರ್ಯದರ್ಶಿ ಗಳಾದ ಎನ್.ಕೆ.ರಮೇಶ್, ತಿರುಮಲ ಮಂಜು, ಯುವ ಮೋರ್ಚಾದ ಅನಿಲ್, ಅಜೇಯ,ಫಣೀಶ್ , ವಿರಾಟ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕವಿತಾ ಮತ್ತು ಮುಖಂಡರಾದ ಬಿ.ಜಿ.ಶ್ರೀನಿವಾಸ,ಮಧು ಬೇಗಲಿ, ನರೇಂದ್ರ ಹಾಗೂ ಬಿ.ಜಿ.ಪಿ ಓ.ಬಿ.ಸಿ.ಮೋರ್ಚಾ,ಮಹಿಳಾ ಮೋರ್ಚಾ , ಎಸ್.ಸಿ.ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.