
ದೊಡ್ಡಬಳ್ಳಾಪುರ ಆಗಸ್ಟ್ 21 ( ವಿಜಯಮಿತ್ರ) : ಪ್ರಾದೇಶಿಕವಾಗಿ ಹಾಲು ಉತ್ಪಾದಕರ ಕುಂದು ಕೊರತೆಗಳನ್ನು ಅರಿತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರ ಪ್ರಾದೇಶಿಕ ಸಭೆ ಕರೆಯಲಾಗಿದೆ ಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದರು.
ಇಂದು ತಾಲೂಕಿನ ಶಿಬಿರ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಾದೇಶಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಪ್ರಾದೇಶಿಕವಾಗಿ ಹಾಲು ಉತ್ಪಾದಕ ರೈತರಲ್ಲಿ ಕೆಲ ಸಮಸ್ಯೆಗಳಿದ್ದು ಅವುಗಳನ್ನು ಮನಗೊಂಡು ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಈ ಸಭೆ ಆಯೋಜನೆ ಮಾಡಲಾಗಿದೆ ಹಾಗೂ ಡೈರಿಗಳ ನಿರ್ವಹಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಪ್ರಶಂಸನಾ ಪತ್ರ ನೀಡಿ ಬಹುಮಾನ ವಿತರಣೆ ಮಾಡುವ ಮೂಲಕ ಗೌರವಿಸಲಾಗಿದೆ ತಾಲ್ಲೂಕಿನಲ್ಲಿ ಹಾಲು ಉತ್ಪಾದನೆ ಉತ್ತಮ ಸ್ಥಿತಿಯಲ್ಲಿದ್ದು ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬಮುಲ್ ಅಧ್ಯಕ್ಷ ರಾಜಕುಮಾರ್, ಎಲ್. ವಿ. ನಾಗರಾಜು, ಡಾ. ಜಿಯಾ ಉಲ್ಲಾ, ಡಾ. ಶ್ರೀಧರ್ ಸೇರಿದಂತೆ ತಾಲೂಕಿನ ಹಲವು ಗಣ್ಯರು, ಹಾಲು ಉತ್ಪಾದಕ ರೈತರು ಉಪಸ್ಥಿತರಿದ್ದರು.