ಜಿಲ್ಲೆಯಾದ್ಯಂತ ನಾಳೆ ಎಲ್ಲಾ ಶಾಲೆಗಳಿಗೆ ರಜೆ : ರಜೆ ಘೋಷಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Spread the love

ಬೆಂಗಳೂರು ನಗರ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಮಕ್ಕಳು ಪರದಾಡುವಂತಾಗಿದೆ ಇದನ್ನು ಮನಗಂಡ ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿ.ಸಿ. ಜಗದೀಶ್ ನಾಳೆ (23-10-2024) ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಮಾಡಲಾಗಿದೆ.

 

 

ಆದೇಶದ ಅನ್ವಯ ಬೆಂಗಳೂರು ನಗರ ಜಿಲ್ಲೆಯ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಕಾಲೇಜುಗಳಿಗೆ ರಜೆ ಇಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

© 2026 Malnad TV. All Rights Reserved.