ಜಿಲ್ಲಾಡಳಿತ ಭವನ ಆವರಣದಲ್ಲಿ ಹಲ್ಮಿಡಿ ಶಾಸನ ಅನಾವರಣ

Spread the love

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡದ ಮೊಟ್ಟಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿ‌, ಪುಷ್ಪಾರ್ಚನೆ ನೆರವೇರಿಸಿದರು.

*“ಕರ್ನಾಟಕ ಸಂಭ್ರಮ-50’ರ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸುವ ಮೂಲಕ ಈ ಸವಿನೆನಪನ್ನು ಶಾಶ್ವತವಾಗಿಡುವುದು ಯೋಜನೆಯ ಉದ್ದೇಶ*

 

*ಕನ್ನಡದ ಮೊದಲ ಶಿಲಾ ಶಾಸನ*

 

ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಬರಹ ಇದರಲ್ಲಿತ್ತು. ಇದು ಕ್ರಿ.ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನ-ಅವಲೋಕನಗಳು ನಡೆದಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ಸ್ವರೂಪದಲ್ಲಿ ಇರಿಸಲಾಗಿದೆ.

Ad

*ಹಲ್ಮಿಡಿ ಶಾಸನದ ಪ್ರತಿಕೃತಿ ಕುರಿತು ಒಂದಿಷ್ಟು ಮಾಹಿತಿ :

-ಎತ್ತರ: ನಾಲ್ಕೂವರೆ ಅಡಿ

-ಅಗಲ: 2 ಅಡಿ

-ದಪ್ಪ: 6 ಇಂಚು

-ತೂಕ: 450 ರಿಂದ 500 ಕಿಲೋ

Leave a Reply

Your email address will not be published. Required fields are marked *

© 2026 Malnad TV. All Rights Reserved.