
ದೊಡ್ಡಬಳ್ಳಾಪುರ: ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಿದರು . ಹಲವು ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆಯ ನ್ಯೂನತೆಯನ್ನು ಹೋಗಲಾಡಿಸಲು ಶ್ರಮಿಸಿದ್ದರು. ಕನಕದಾಸರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರ, ಸಮಾಜದ ಪರಿವರ್ತನೆ ಕನಕದಾಸರ ಸಾಹಿತ್ಯ ಸಹಕಾರಿಯಾಗಿದೆ ಎಂದು ಮುಖಂಡರಾದ ಮಹೇಶ್ ತಿಳಿಸಿದರು.
ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಏಳ್ಳುಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನೆಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ದಾಸ ಶ್ರೇಷ್ಠ ಕನಕದಾಸರ ಕೀರ್ತನೆಗಳನ್ನು ಓದಬೇಕು ಕೀರ್ತನೆಗಳಲ್ಲಿರುವ ಆದರ್ಶ ಮೌಲ್ಯವನ್ನು ಪ್ರತಿಯೊಬ್ಬರೂ ಅಳವಡಿಸಿ ಕೊಂಡು ಸಮಾಜದ ಇತರರಿಗೆ ತಿಳಿಸುವ ಪ್ರಯತ್ನ ಮಾಡಬೇಕು,ಆದ್ದರಿಂದ ವಿದ್ಯಾರ್ಥಿಗಳು ದಾಸರು ಹಾಗೂ ವಚನಕಾರರ ಸಾಹಿತ್ಯ ಓದುವುದಷ್ಟೇಲ್ಲದೇ ಕೀರ್ತನೆಗಳ ಸಾರಾಂಶವನ್ನು ಸಮಾಜದ ಇತರರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಮಹೇಶ್,ಮುಖ್ಯ ಶಿಕ್ಷಕರಾದ ಈಶ್ವರಯ್ಯ , ಮುದ್ದುಗಂಗಪ್ಪ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.