
ದೊಡ್ಡಬಳ್ಳಾಪುರ : ಉಪಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ವಿರೋಧ ಪಕ್ಷಗಳು ಮಾಡಿದ ಸುಳ್ಳು ಆರೋಪಗಳಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣ ಸ್ವಾಮಿ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯದ ಉಪಚುನಾವಣೆ ಫಲಿತಂಶ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಜನತೆಗೆ ನೀಡಿರುವ ವಿಶೇಷ ಯೋಜನೆ ಹಾಗೂ ಕಾರ್ಯಕ್ರಮಗಳು ಈ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಸಹಕಾರಿಯಾಗಿದೆ ಎಂದರು.
ರಾಜ್ಯದ ಸಂಡೂರು, ಚನ್ನಪಟ್ಟಣ, ಶಿಗ್ಗಾವಿ ಕ್ಷೇತ್ರಗಳಲ್ಲಿ ನೆಡೆದ ಉಪಚುನಾವಣೆಯಲ್ಲಿ ಮತದಾರರು ವಿರೋಧ ಪಕ್ಷಗಳಿಗೆ ತಕ್ಕ ಉತ್ತರವನ್ನು ತಮ್ಮ ಮತದಾನದ ಮೂಲಕ ನೀಡಿದ್ದಾರೆ, ಅಭಿವೃದ್ಧಿ ಪರ ನಿಲುವನ್ನು ಕೈಗೊಂಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಜೊತೆ ಸದಾ ಇದ್ದಾರೆ ಎನ್ನುವುದಕ್ಕೆ ಇದೊಂದು ಉತ್ತಮ ನಿದರ್ಶನ ಎಂದರು.
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ತಮ್ಮ ಮಗನನ್ನು ಕಣಕಿಳಿಸಿದ್ದು,ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನ್ನು ಅನುಭವಿಸಿದ್ದಾರೆ, ಕುಮಾರಸ್ವಾಮಿಯವರದ್ದು ಆಸೆಯಲ್ಲ ಅವರದು ದುರಾಸೆ ಒಂದು ಕ್ಷೇತ್ರವನ್ನು ಬೇರೆ ಅಭ್ಯರ್ಥಿಗೆ ಬಿಟ್ಟುಕೊಟ್ಟಿದ್ದರೆ ಗೆಲುವು ಸಾಧಿಸಬಹುದಿತೇನೋ ಆದರೆ ಅವರ ದುರಾಸೆಯೇ ಈ ಪರಿಸ್ಥಿತಿಗೆ ಕಾರಣ ಎಂದರು.
ಈ ಉಪಚುವಣೆಯಲ್ಲಿ ಏನ್ ಡಿ ಎ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ನಾವು ಸದಾ ಅಭಿವೃದ್ಧಿ ಪರ ಎಂಬುದನ್ನು ರಾಜ್ಯದ ಜನತೆ ಸಾಬೀತು ಮಾಡಿದ್ದಾರೆ ಎಂದರು.