ಉರುಳು ಸೇವೆ ಮಾಡುವ ಮೂಲಕ ರೈತರ ಪ್ರತಿಭಟನೆ : ಸ್ಥಳೀಯವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸ್ಥಾಪಿಸುವಂತೆ ಅಗ್ರಹ

Spread the love

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಾಲ್ಲೂಕಿಗೆ ತರುವ ನಿಟ್ಟಿನಲ್ಲಿ ಅರ್ಕಾವತಿ ನದಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.

 

ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ರೈತರು ಉರುಳು ಸೇವೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

 

ತಾಲ್ಲೂಕಿನ ಭಾಷೆಟ್ಟಿ ಹಳ್ಳಿಯಲ್ಲಿ ಕಾರ್ಖಾನೆಗಳಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ತ್ಯಾಜ್ಯನೀರನ್ನು ರಾಜಕಾಲವೇ ಮುಖಾಂತರ ಕೆರೆಗಳಿಗೆ ಬಿಡುತ್ತಿದ್ದು ಸಾಕ್ಷಿ ಸಮೇತ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೋಡಿದರೂ ಏನು ಪ್ರಯೋಜನವಾಗುತ್ತಿಲ್ಲ.ಇದಕ್ಕೆ ಪ್ರಮುಖ ಕಾರಣ ಮಾಲಿನ್ಯ ನಿಯಂತ್ರಣ ಮಂಡಳಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಾರ್ಯನಿರ್ವಹಿಸದೆ ಇರುವುದು, ಬೆಂಗಳೂರಿನಲ್ಲಿ ಇದರ ಕಛೇರಿ ಇರುವುದರಿಂದ ಸೂಕ್ತಸಮಯಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಈ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸಮಿತಿಯು ನಿರಂತರವಾಗಿ ಜಿಲ್ಲಾಧಿಕಾರಿಗಳಿಗೆ ಬರವಣಿಗೆ ಮುಖಾಂತರ ದೂರಗಳನ್ನು ಕೊಟ್ಟಿರುತ್ತೇವೆ ಹಾಗೂ ಸಾಕಷ್ಟು ಬಾರಿ ಹೋರಾಟ ಸಮಿತಿಯ ಜೊತೆ ಸಭೆ ನಡೆಸಿದಾಗಲೆಲ್ಲ ಮೌಖಿಕವಾಗಿಯೂ ತಿಳಿಸಿರುತ್ತೇವೆ, ಆದರೂ ಏನು ಪ್ರಯೋಜನವಾಗಿಲ್ಲ ಹಾಗಾಗಿ ಅರ್ಕಾವತಿ ನದಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ರೀತಿಯ ಪ್ರತಿಭಟನೆಯನ್ನು ಮಾಡಲು ನಿರ್ಧರಿಸಿದ್ದೇವೆ ಎಂದು ಹೋರಾಟಗಾರರು ತಿಳಿಸಿದರು.

ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸ್ಥಳೀಯವಾಗಿ ಕಲ್ಪಿಸಬೇಕು ಇಲ್ಲವಾದಲ್ಲಿ ನಮ್ಮ ಹೋರಾಟ ಮತ್ತಷ್ಟು ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

 

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸತೀಶ್, ವಸಂತ್ ಕುಮಾರ್, ರಮೇಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

© 2026 Malnad TV. All Rights Reserved.