ಬೆಂ.ಗ್ರಾ.ಜಿಲ್ಲೆ,ಜ 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು(ಎನ್.ಜಿ.ಒ) ಗಳು ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡದವರ
ಶಿಕ್ಷಣ, ಆರೋಗ್ಯ ಮತ್ತು ಜೀವನೋಪಾಯ ಕಲ್ಯಾಣಕ್ಕಾಗಿ ಶ್ರಮಿಸುವ ಸ್ವಯಂ ಸೇವಾ ಎನ್.ಜಿ.ಓ ಸಂಸ್ಥೆಗಳು ಹೊಸ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆಯಲು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಫೆಬ್ರುವರಿ 15 ರೊಳಗೆ ಎನ್.ಜಿ.ಓ ಪೋರ್ಟಲ್ ngo.tribal.gov.in ವೆಬ್ ಸೈಟ್ ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಕಛೇರಿ ದೂರವಾಣಿ ಸಂಖ್ಯೆ 080-29787448 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

