
ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಭಾವತಿ ಎನ್ನುವವರು ಸರಸ್ವತಮ್ಮ ಎನ್ನುವವರಿಗೆ ಸರ್ಕಾರ ನಿರಾಶ್ರಿತರ ಯೋಜನೆಯಡಿ ಹಂಚಿಕೆ ಮಾಡಿದ್ದ ನಿವೇಶನವನ್ನು ಕಬಳಿಸುವ ಹುನ್ನಾರ ನಡೆಸಿ ಅಕ್ರಮ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬಿಲ್ ಕಲೆಕ್ಟರ್ ಪ್ರಭಾವತಿ ಹಾಗೂ ಆಕೆಯ ಪತಿ ನಂಜಪ್ಪ ಎನ್ನುವವರು ಸರಸ್ವತಮ್ಮ ಎನ್ನುವವರಿಗೆ ಸೇರಿದ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣಮಾಡುತ್ತಿದ್ದಾರೆ ಎಂದು ಆರೋಪಿಸಿ ಸರಸ್ವತಮ್ಮ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ದೊಡ್ಡಬೆಳವಂಗಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಬಿಲ್ ಕಲೆಕ್ಟರ್ ಪ್ರಭಾವತಿ ವಿರುದ್ಧ ದೂರು ನೀಡಿದ್ದು.
ಸರ್ಕಾರ ಹಂಚಿಕೆ ಮಾಡಿದ್ದ ನಿವೇಶನಕ್ಕೆ ಸಂಬಂದಿಸಿದಂತೆ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಯಲ್ಲಿ ಸರಸ್ವತಮ್ಮ ಹೆಸರಲ್ಲಿ ಖಾತೆ ಇದ್ದು 2021 ರವರೆಗೆ ಕಂದಾಯವನ್ನು ಕಟ್ಟಿಸಿ ಕೊಂಡಿದ್ದ ಬಿಲ್ ಕಲೆಕ್ಟರ್ ಪ್ರಭಾವತಿ ,ತಮ್ಮ ವಯಕ್ತಿಕ ಪ್ರಭಾವದಿಂದ ಅದೇ ಜಾಗಕ್ಕೆ ಅತೀಕ್ರಮ ಪ್ರವೇಶ ಮಾಡಿ ನಕಲಿ ದಾಖಲೆ ಸೃಷ್ಟಿಸಿ ನಮ್ಮ ಜಾಗದಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿದ್ದಾರೆ ಹಾಗೂ ಸೂಕ್ತ ನ್ಯಾಯ ಕೊಡಿಸುವಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ಬಿಲ್ ಕಲೆಕ್ಟರ್ ಪ್ರಭಾವತಿ ವಿರುದ್ಧ ದೂರು ನೀಡಿದ್ದಾರೆ.
ಇನ್ನೂ ಈ ಬಗ್ಗೆ ಪರ ವಿರೋಧದ ಚೆರ್ಚೆಗಳು ಜೋರಾಗಿದ್ದು ಗ್ರಾಮ ಪಂಚಾಯತಿ ಸರ್ಕಾರಿ ನೌಕರರು ಈಗಾದರೆ ಬಡವರ ನಿವೇಶನ ಉಳಿಯುತ್ತಾ ಎನ್ನುವ ಮಾತುಗಳು ಕೇಳಿ ಬಂದಿದ್ದು.ಗ್ರಾಮ ಪಂಚಾಯತಿಯಲ್ಲಿ ಖಾತೆ ಇರುವ ನಿವೇಶನದಲ್ಲಿ ಅಲ್ಲಿನ ಬಿಲ್ ಕಲೆಕ್ಟರ್ ಅಕ್ರಮವಾಗಿ ಮನೆ ನಿರ್ಮಾಣ ಕುರಿತು ದೊಡ್ಡಬೆಳವಂಗಲ ಗ್ರಾಮ ಪಂಚಾಯತಿ ಅಧಿಕಾರಿಗಳು ಸುಮ್ಮನೆ ಕುಳಿತಿರುವುದೇಕೆ ಎನ್ನುವ ಪ್ರೆಶ್ನೆಯೂ ಸಹ ಇಲ್ಲಿ ಉದ್ಭವವಾಗುತ್ತದೆ .ಬಿಲ್ ಕಲೆಕ್ಟರ್ ಪ್ರಭಾವತಿ ಸಾಕ್ಷಿ ನಾಶ ಮಾಡುವ ಸಂಭವವಿರುವುದರಿಂದ ಕೂಡಲೇ ಬಿಲ್ ಕಲೆಕ್ಟರ್ ಪ್ರಭಾವತಿ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಅಮಾನತ್ತು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.