ಫೆ. 24 ರಿಂದ ಶುಶೂಷಾಧಿಕಾರಿಗಳ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ : ಹೋರಾಟ ಕುರಿತು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಕೆ

Spread the love

ಬೀದರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ಆಧಾರದಡಿಯಲ್ಲಿ ಸೇವೆಸಲ್ಲಿಸುತ್ತಿರುವ ಶುಶೂಷಾಧಿಕಾರಿಗಳು ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಮಟ್ಟದಲ್ಲಿ ದಿನಾಂಕ: 24/02/2024 ರಂದು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರಿಗೆ ಬೀದರ್ ಜಿಲ್ಲೆಯ ಶುಶೂಷಾಧಿಕಾರಿಗಳು ಮನವಿ ಸಲ್ಲಿಸಿದರು.

 

ಈ ಕುರಿತು ಶುಶೂಷಾಧಿಕಾರಿಗಳು ಮಾತನಾಡುತ್ತಾ ರಾಷ್ಟ್ರೀಯ ಆರೋಗ್ಯ ಅಭಿಯಾನದ ಶುಶೂಷಾಧಿಕಾರಿಗಳಾದ ನಾವು ಸುಮಾರು 15-20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಅತೀ ಕಡಿಮೆ ವೇತನದಲ್ಲಿ ಯಾವುದೇ ಸೌಲಭ್ಯಗಳಿಲ್ಲದೇ ಖಾಯಂ ನೌಕರರಷ್ಟೇ ಇಲಾಖೆಯು ವಹಿಸಿದ ಎಲ್ಲಾ ಕೆಲಸಗಳನ್ನು ಚಾಚೂ ತಪ್ಪದೇ ನಿರ್ವಹಿಸುತ್ತಿದ್ದೇವೆ.ಕೋವಿಡ್-19 ಸಂದರ್ಭದಲ್ಲೂ ಹೆಣ್ಣು ಮಕ್ಕಳೇ ಹೆಚ್ಚಾಗಿರುವ ನಾವು ನಮ್ಮ ಕುಟುಂಬವನ್ನು ಬಿಟ್ಟು ಜೀವದ ಹಂಗು ತೊರೆದು ಹಗಲಿರುಳೆನ್ನದೇ ಸಾರ್ವಜನಿಕರಿಗೆ ಪ್ರಾಮಾಣಿಕ ಸೇವೆ ನೀಡಿದ್ದೇವೆ.

ಆದರೆ ಅಲ್ಪ ವೇತನದಲ್ಲಿ ಇನ್ನಿತರ ಯಾವುದೇ ಸೌಲಭ್ಯಗಳಿಲ್ಲದೇ ಕೌಟುಂಬಿಕ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಈಗಾಗಲೇ ಹಲವಾರು ಬಾರಿ ನಮ್ಮ ಕುಂದುಕೊರತೆಗಳು ಹಾಗೂ ಬೇಡಿಕೆಗಳ ಬಗ್ಗೆ ಸರಕಾರಕ್ಕೆ ಮತ್ತು ಅಧಿಕಾರಿಗಳಿಗೆ ಮನವರಿಕೆ ಮಾಡಿ ಮನವಿ ಅಹವಾಲುಗಳನ್ನು ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಶುಶೂಷಾಧಿಕಾರಿಗಳ ಸಮಸ್ಯೆ ಹಾಗೂ ಬೇಡಿಕೆಗಳನ್ನು ಅಧ್ಯಕ್ಷರಿಗೆ ಮನವರಿಕೆ ಮಾಡಿದರು.

 

ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಶುಶೂಷಾಧಿಕಾರಿಗಳಾದ ಅನಿತ ಸುನಿಲ್ ,ಎಲಿಜಬತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *