
ಬೆಂಗಳೂರು :NHM ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ನಡೆಯುತ್ತಿದ್ದು, ವೇತನ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಮುಮೋದನೆ ಪಡೆಯಬೇಕಾಗುತ್ತದೆ.. ಈ ನಿಟ್ಟಿನಲ್ಲಿ ಮಾರ್ಚ್ 10 ರಂದು ಸಭೆ ನಡೆಸಿ, ಸರ್ಕಾರ ತನ್ನ ನಿಲುವು ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು,ಈ ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಭರವಸೆ ನೀಡಿ ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದ ಹಿನ್ನಲೆ ಹೋರಾಟಗಾರರು ತಮ್ಮ ಪ್ರತಿಭಟನೆಯನ್ನು ವಾಪಾಸ್ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಮಾನ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ NHM ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಶುಶೂಷಕೀಯರು ಪ್ರತಿಭಟನೆ ಹಿಂಪಡೆದಿದ್ದಾರೆ.
NHM ಅಡಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೃಪಾಂಕ ನೀಡುವ ಮೂಲಕ ನೇಮಕಾತಿ ವೇಳೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ .ಜೊತೆಗೆ ಅಂತರ್ಜಿಲ್ಲಾ ವರ್ಗಾವಣೆಗೆ ಒಂದು ಬಾರಿ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ ಸಚಿವರು, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಸಚಿವರ ಭರವಸೆ ಹಿನ್ನೆಲೆಯಲ್ಲಿ NHM ಶುಶೂಷಕೀಯರು ತಮ್ಮ ಪ್ರತಿಭಟನೆ ಹಿಂಪಡೆದಿದ್ದಾರೆ.