ನಾಳೆ (ಮಾರ್ಚ್ 14) ತೂಬಗೆರೆ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

Spread the love

ದೊಡ್ಡಬಳ್ಳಾಪುರ: ತಾಲೂಕಿನ  ಇತಿಹಾಸ ಪ್ರಸಿದ್ದ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವ, ಸಕಲ ಸಿದ್ದತೆ ನಡೆದಿದೆ. ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು  ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ.

 

ಮಧ್ಯಾಹ್ನ 12-12 ರಿಂದ 1:00 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ.

ರಥೋತ್ಸವದ ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ  ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

 

ರಾತ್ರಿ 7 ಗಂಟೆಗೆ  ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.

 

ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ, ಸಂಸದ ಸುಧಾಕರ್, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಶಾಮಪ್ಪ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

 

Leave a Reply

Your email address will not be published. Required fields are marked *

© 2026 Malnad TV. All Rights Reserved.