
ದೊಡ್ಡಬಳ್ಳಾಪುರ : ಸರ್ಕಾರವು ಜೂನ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ನಿರ್ಮಾಣ ಮಾಡಲು ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಆವರಣದಲ್ಲಿ ಸ್ಥಳ ಸೂಚಿಸಿದ್ದು ನುಡಿದಂತೆ ನಡೆವ ಸರ್ಕಾರ ಎಂದು ಮತ್ತೊಮ್ಮೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಬೀತು ಮಾಡಿಕೊಂಡಿದೆ ನಮ್ಮ ಸಂಘಟನೆಯ ಮನವಿಗೆ ಸ್ಪಂದಿಸಿದ ಆಡಳಿತ ಸರಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಕರ್ನಾಟಕ ಭೀಮ ಸೇನೆ ರಾಜ್ಯ ಕಾರ್ಯದರ್ಶಿ ಮಂಜುನಾಥ್ ರಾವಣ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತೆಲಂಗಣ ರಾಜ್ಯದಲ್ಲಿ 125 ಅಡಿ ಎತ್ತರ ಮತ್ತು ಆಂಧ್ರದಲ್ಲಿ 206 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಿರುವಂತೆ ನಮ್ಮ ರಾಜ್ಯದಲ್ಲೂ 250 ಅಡಿ ಬೃಹತ್ ಎತ್ತರದ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ” ಬಿ. ಆರ್. ಅಂಬೇಡ್ಕರ್ ರವರ 250 ಅಡಿ ಎತ್ತರದ ಬೃಹತ್ ಪ್ರತಿಮೆ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಮಾಡಬೇಕೆಂದು ಕರ್ನಾಟಕ ಭೀಮ್ ಸೇನೆ (ರಿ) ಸಂಘಟನೆ ವತಿಯಿಂದ, ಸಮುದಾಯದ ಪರವಾಗಿ ಹಾಗೂ ಬಾಬಾ ಸಾಹೇಬ್ ಡಾ” ಬಿ. ಆರ್.ಅಂಬೇಡ್ಕರ್ ರವರ ಅನುಯಾಯಿಗಳ ಪರವಾಗಿ ರಾಜ್ಯದ 30 ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳಿಗೆ ಏಕಕಾಲಕ್ಕೆ ಮನವಿಯನ್ನು ಸಲ್ಲಿಸಿದ್ದು,ನಮ್ಮ ಸಂಘಟನೆಯ ನಿರಂತರ ಒತ್ತಾಯ ಹಾಗೂ ಮನವಿಗೆ ಸ್ಪಂದಿಸಿ ಮಾನ್ಯ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು, ಏಪ್ರಿಲ್ 14, 2025 ರಂದು ಬಾಬಾ ಸಾಹೇಬ್ ಡಾ” ಬಿ. ಆರ್.ಅಂಬೇಡ್ಕರ್ ರವರ 134 ನೇ ಜಯಂತಿಯಂದು ಪ್ರತಿಮೆ ಪ್ರತಿಷ್ಠಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದೂ ನಿಜಕ್ಕೂ ಶ್ಲಾಘನೀಯ,ಕರ್ನಾಟಕ ಭೀಮ್ ಸೇನೆ (ರಿ) ಸಂಘಟನೆಯ ಮನವಿಗೆ ಸ್ಪಂದಿಸಿದ ಆಡಳಿತ ಸರಕಾರಕ್ಕೆ ಹಾಗೂ ಈ ಒಂದು ವಿಷಯಕ್ಕೆ ಬೆಂಬಲ ಸೂಚಿಸಿದ ರಾಜ್ಯದ ಎಲ್ಲ ದಲಿತ ಹಾಗೂ ಪ್ರಗತಿಪರ ಸಂಘಟನೆಯ ಮುಖಂಡರಿಗೂ. ಹಾಗೂ ಈ ಮನವಿ ಸಲ್ಲಿಸಲು ನಿರಂತರವಾಗಿ ನಮ್ಮ ಜೊತೆ ಸಹಕರಿಸಿದ ಸಂಘಟನೆಯ ಎಲ್ಲಾ ಪದಾಧಿಕಾರಿಗಳಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು
ಈ ಸಂದರ್ಭದಲ್ಲಿ ನರೆದಿದ್ದ ಹೋರಾಟಗಾರರು ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.
ದಲಿತ ಮುಖಂಡರಾದ ದಾಳಪ್ಪ ಮಾತನಾಡಿ ನಮ್ಮ ನಿರಂತರ ಹೋರಾಟ ಹಾಗೂ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರಕ್ಕೆ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಡಾ. ಬಿ ಆರ್ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ಪ್ರತಿಷ್ಠಾಪನೆ ಮಾಡುವುದು ದಲಿತ ಹಾಗೂ ಶೋಷಿತ ಸಮುದಾಯದ ದೊಡ್ಡ ಕನಸಾಗಿತ್ತು ನಮ್ಮೆಲ್ಲರ ಕನಸನ್ನು ರಾಜ್ಯ ಸರ್ಕಾರ ನನಸು ಮಾಡಿದೆ . ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದಗಳು ಅರ್ಪಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಗುರುಪ್ರಸಾದ್ , ಕರ್ನಾಟಕ ಭೀಮ ಸೇನೆ ತಾಲೂಕು ಅಧ್ಯಕ್ಷ ದಾಳಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ರಮೇಶ್, ಕಾರ್ಯಕರ್ತರಾದ ಸಂಜೀವ್ ಸೇರಿದಂತೆ ಹಲವು ಹೋರಾಟಗಾರರು ಹಾಜರಿದ್ದರು.