ದೇವನಹಳ್ಳಿ ತಾಲೂಕು ಆರೋಗ್ಯಧಿಕಾರಿ (THO) ಡಾ.ಸಂಜಯ್ ( 52 ವರ್ಷ ) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ
ವೈದ್ಯರ ಸಮಾವೇಶದಲ್ಲಿ ಭಾಗವಹಿಸಲು ಚನ್ನೈಗೆ ತೆರಳಿದ್ದ ಅವರಿಗೆ ಇಂದು ಸಂಜೆ 7.30 ರ ಸುಮಾರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಸ್ತುತ ದೇವನಹಳ್ಳಿಯ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಜಿಲ್ಲೆಯ ವೈದ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಡಾ.ಸಂಜಯ್ ಸದಾ ವೈದ್ಯರು, ಸಿಬ್ಬಂದಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು ಅಲ್ಲದೆ ಕೋವಿಡ್ ಸಂದರ್ಭದಲ್ಲಿ ಆಕಾಶ್ ಆಸ್ಪತ್ರೆ, ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ನಿಯಂತ್ರಣ ಸೇವೆಯ ಜಿಲ್ಲಾ ಸಮನ್ವಯಕರಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದರು ಹಾಗೂ ಉತ್ತಮ ಆಡಳಿತಗಾರರಾಗಿ ಆರೋಗ್ಯ ಇಲಾಖೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು ಅವರ ಅಗಲಿಕೆಯು ಆರೋಗ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಿಬ್ಬಂದಿ ವರ್ಗ ತಿಳಿಸಿದ್ದು ಸಂತಾಪ ಸೂಚಿಸಿದೆ.
ನಾಳೆ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
